* ಪ್ರಶಸ್ತಿಯು ತಲಾ ಐದು ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ
ಬೆಂಗಳೂರು: ಕನ್ನಡ ಸಂಘರ್ಷ ಸಮಿತಿ ನೀಡುವ 2026ನೇ ಸಾಲಿನ ಡಾ. ಅನುಪಮಾ ನಿರಂಜನ ಪ್ರಶಸ್ತಿಗೆ ಬರಹಗಾರ್ತಿ ದು. ಸರಸ್ವತಿ ಹಾಗೂ ಡಾ. ಕೋ.ವೆಂ. ರಾ. ಕನ್ನಡ ಪರಿಚಾರಕ ಪ್ರಶಸ್ತಿಗೆ ಕನ್ನಡ ಕಾರ್ಯಕರ್ತ ಆರ್. ಸದಾಶಿವಯ್ಯ ಜರಗನಹಳ್ಳಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ ಐದು ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ. ಜೂ. 14ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕರ್ನಾಟಕ ಲೇಖಕಿಯರ ಸಂಘದ ಮಾಜಿ ಅಧ್ಯಕ್ಷೆ ಎಚ್. ಎಲ್. ಪುಷ್ಪ, ಕನ್ನಡ ಹೋರಾಟಗಾರ ಹಾಗೂ ಹಿರಿಯ ಪತ್ರಕರ್ತ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಇತರರು ಭಾಗವಹಿಸಲಿದ್ದಾರೆ ಎಂದು ಸಮಿತಿ ತಿಳಿಸಿದೆ.