ಡಾ.ಜಿಎಸ್‌ಎಸ್ ಕನ್ನಡದ ಮೇರು

ಸಿಂದಗಿ ತಾಲೂಕಿನ ರಾಂಪೂರ ಆರೂಢಮಠದಲ್ಲಿ ನಡೆದ ಜಿ.ಎಸ್. ಶಿವರುದ್ರಪ್ಪನವರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಿತ್ಯಾನಂದ ಮಹಾರಾಜರು ಉದ್ಘಾಟಿಸಿದರು. ಮಲ್ಲಿಕಾರ್ಜುನ ಮೇತ್ರಿ, ಶಂಕರ ಬೈಚಬಾಳ, ಡಾ. ಎಸ್.ಎಸ್. ಹಳಮನಿ ಮತ್ತಿತರರಿದ್ದರು.
ಸಿಂದಗಿ ತಾಲೂಕಿನ ರಾಂಪೂರ ಆರೂಢಮಠದಲ್ಲಿ ನಡೆದ ಜಿ.ಎಸ್. ಶಿವರುದ್ರಪ್ಪನವರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಿತ್ಯಾನಂದ ಮಹಾರಾಜರು ಉದ್ಘಾಟಿಸಿದರು. ಮಲ್ಲಿಕಾರ್ಜುನ ಮೇತ್ರಿ, ಶಂಕರ ಬೈಚಬಾಳ, ಡಾ. ಎಸ್.ಎಸ್. ಹಳಮನಿ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರೊ. ಮಲ್ಲಿಕಾರ್ಜುನ ಮೇತ್ರಿ ಹೇಳಿಕೆ
  • ವಿಶೇಷ ಉಪನ್ಯಾಸ ಕಾರ್ಯಕ್ರಮ
ಸಿಂದಗಿ: ಕನ್ನಡ ಸಾಹಿತ್ಯವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಕೀರ್ತಿ ಕವಿ ಡಾ. ಜಿ.ಎಸ್. ಶಿವರುದ್ರಪ್ಪನವರಿಗೆ ಸಲ್ಲುತ್ತದೆ ಎಂದು ಪ್ರೊ. ಮಲ್ಲಿಕಾರ್ಜುನ ಮೇತ್ರಿ ಹೇಳಿದರು.
ತಾಲೂಕಿನ ರಾಂಪೂರ ಪಿ.ಎ. ಆರೂಢ ಮಠದಲ್ಲಿ ಗುರುವಾರ ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವೇದಿಕೆ ಮತ್ತು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಮನ್ವಯ ಕವಿ ಡಾ. ಜಿ.ಎಸ್. ಶಿವರುದ್ರಪ್ಪನವರ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.
ಜಿಎಸ್‌ಎಸ್ ಅವರು ಕನ್ನಡ ಭಾಷೆಗೆ ಅಸ್ಮಿತೆ ಹಾಗೂ ರಾಷ್ಟ್ರಕವಿಯಾಗಿ ಕನ್ನಡ ಮೇರು ಆಗಿದ್ದರು ಎಂದರು.
ಅಧ್ಯಕ್ಷತೆ ವಹಿಸಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಎಸ್. ಹಳಮನಿ ಮಾತನಾಡಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಇಂತಹ ಸಾಹಿತ್ಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಓದನ್ನು ಪೋಷಿಸುವ ಮತ್ತು ಅವರಿಗೆ ಸಾಹಿತ್ಯ ಅಭಿರುಚಿಯ ಪ್ರೇರಣೆಗೆ ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಸಾಹಿತ್ಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಚಕೋರ ಸಾಹಿತ್ಯ ವೇದಿಕೆ ಸಂಚಾಲಕ ಶಂಕರ ಬೈಚಬಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೂಢಮಠದ ನಿತ್ಯಾನಂದ ಮಹಾರಾಜರು ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕ ಡಾ. ರಾಜಶೇಖರ ಬೆನಕನಳ್ಳಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಹಣಮಂತ ಹರವಾಳ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಯಮನಪ್ಪ ಕೆಳಗೇರಿ ಮತ್ತಿತರರಿದ್ದರು. ಶಶಿಕಲಾ ಪ್ರಾರ್ಥಿಸಿದರು. ಡಾ. ರಮೇಶ ಕತ್ತಿ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net