ಕುಲಸಚಿವರಾಗಿ ಡಾ. ಮಾಕಾ ಅಧಿಕಾರ ಸ್ವೀಕಾರ

ಡಾ. ಲಕ್ಷ್ಮಿ ಮಾಕಾ
ಡಾ. ಲಕ್ಷ್ಮಿ ಮಾಕಾ
Published on

ಪ್ರಮುಖ ಮುಖ್ಯಾಂಶಗಳು

  • ಕಲಬುರಗಿ ಶರಣಬಸವ ವಿಶ್ವವಿದ್ಯಾಲಯ
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಹಾಲಿ ಕುಲಸಚಿವ ಡಾ.ಎಸ್​.ಜಿ.ಡೊಳ್ಳೇಗೌಡರ್​ ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ಸಲ್ಲಿಸಿದ ನಂತರ ತಕ್ಷಣದಿಂದ ಜಾರಿಗೆ ಬರುವಂತೆ, ವಿಶ್ವವಿದ್ಯಾಲಯದ ಡೀನ್​, ಗೋದುತಾಯಿ ಮಹಿಳಾ ಇಂಜಿನಿಯರಿಂಗ್​ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥರೂ ಆಗಿರುವ ಡಾ.ಲಕ್ಷಿ$್ಮ ಪಾಟೀಲ್​ ಮಾಕಾ ಅವರನ್ನು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬಡ್ತಿ ನೀಡಲಾಗಿದೆ.
ವಿಶ್ವವಿದ್ಯಾಲಯದಲ್ಲಿ ಸಮರ್ಥ ಆಡಳಿತಾಧಿಕಾರಿಯಾಗಿ ಗುರುತಿಸಿಕೊಂಡಿರುವ ಡಾ.ಲಕ್ಷಿ$್ಮ ಪಾಟೀಲ್​ ಮಾಕಾ ಅವರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಅಧಿಕಾರ ವಹಿಸಿಕೊಂಡು ಶರಣಬಸವೇಶ್ವರ ದೇವಾಲಯದಲ್ಲಿ ಸಂತ ಶರಣಬಸವೇಶ್ವರರಿಗೆ ನಮನ ಸಲ್ಲಿಸಿದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂದ ಅಧ್ಯಕ್ಷರೂ ಆದ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಮಾತೋಶ್ರೀ ಡಾ.ದಾಾಯಿಣಿ ಅವ್ವಾಜಿ ಮತ್ತು ಶರಣಬಸವೇಶ್ವರ ಸಂಸ್ಥಾನದ 9ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರ ಆಶೀರ್ವಾದ ಪಡೆದು, ಸಂದ ಕಾರ್ಯದರ್ಶಿ ಬಸವರಾಜ ದೇಶಮುಖ ಆಶೀರ್ವಾದ ಪಡೆದರು.
ಡಾ.ಮಾಕಾ ವಿಶ್ವವಿದ್ಯಾಲಯದ ಅತ್ಯಂತ ಕಿರಿಯ ಕುಲಸಚಿವರಾಗಿದ್ದು, ವಿಶ್ವವಿದ್ಯಾಲಯವು ತನ್ನ ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಂಶೋಧನಾ ಕಾರ್ಯಗಳೊಂದಿಗೆ ರಾಜ್ಯದಲ್ಲಿ ಉದಯೋನ್ಮುಖ ವಿಶ್ವವಿದ್ಯಾಲಯವಾಗಿ ರೂಪುಗೊಳ್ಳುತ್ತಿರುವ ನಿರ್ಣಾಯಕ ಸಮಯದಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.
ಸಂಸ್ಥಾನದ ಮಾತೋಶ್ರೀ ಡಾ.ದಾಾಯಿಣಿ ಅವ್ವಾಜಿ, ಪೂಜ್ಯ ದೊಡ್ಡಪ್ಪ ಅಪ್ಪಾಜಿ, ಬಸವರಾಜ ದೇಶಮುಖ, ವಿವಿಯ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ, ನಿರ್ದೇಶಕ ಪ್ರೊ.ವಿ.ಡಿ.ಮೈತ್ರಿ ಸೇರಿ ಇತರ ಗಣ್ಯರು ಡಾ.ಲಕ್ಷಿ$್ಮ ಪಾಟೀಲ್​ ಮಾಕಾ ಅವರನ್ನು ಅಭಿನಂದಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net