ಕರ್ನಾಟಕದಲ್ಲೂ ಶಾಲಾ ಮಕ್ಕಳು ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯವಾಗಬೇಕು! ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ..

dr purushotham bilimale
dr purushotham bilimale
Published on
ಬೆಂಗಳೂರು: ( dr purushotham bilimale) ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು ಸುಧಾರಿಸಲು ಯೋಗಿ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಬಂದಿದೆ. ಹೀಗೆ ಕರ್ನಾಟಕದಲ್ಲಯೂ ಕೂಡಾ ಸರ್ಕಾರಿ ಹಾಗೂ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಪ್ರತಿನಿತ್ಯ ಕನ್ನಡ ದಿನಪತ್ರಿಕೆ ಓದಲು ಸರ್ಕಾರ ಒಂದು ಯೋಜನೆ ಜಾರಿಗೆ ತರಬೇಕು ಎಂದು ಸರ್ಕಾರಕ್ಕೆ ನಾನು ಪತ್ರ ಬರೆಯುತ್ತೇನೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ವಿಜಯವಾಣಿ ಜತೆ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಡಾ. ಪುರುಷೋತ್ತಮ ಬಿಳಿಮಲೆ, ಉತ್ತರಪ್ರದೇಶ ಸರ್ಕಾರ ಮಕ್ಕಳ ಜ್ಞಾನ ಹೆಚ್ಚಿಸಲು ಸರ್ಕಾರಿ ಶಾಲೆಯಲ್ಲಿ ದಿನಪತ್ರಿಕೆ ಓದುವುದು ಕಡ್ಡಾಯ ಎನ್ನುವ ನಿಯಮ ಜಾರಿಗೆ ತಂದಿದ್ದು, ಒಳ್ಳೆ ಸಂಗತಿಯಾಗಿದೆ. ಉತ್ತರ ಪ್ರದೇಶ ಮಾದರಿಯನ್ನು ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಪ್ರತಿನಿತ್ಯ ಕನ್ನಡ ದಿನಪತ್ರಿಕೆ ಓದಬೇಕು ಎನ್ನುವ ನಿಮಯ ಜಾರಿಗೆ ತಂದಿದ್ದೆ ಆದಲ್ಲಿ ಕನ್ನಡ ಭಾಷೆಯ ಮೌಲ್ಯವನ್ನು ನಾವು ಇನ್ನಷ್ಟು ಮಕ್ಕಳಿಗೆ ತಿಳಿಸಬಹುದಾಗಿದೆ ಎಂದಿದ್ದಾರೆ.
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವುದು ಒಂದು ಕ್ರಾಂತಿಕಾರಿ ಹೆಜ್ಜೆಯಾಗಬಲ್ಲದು. ಕನ್ನಡ ದಿನಪತ್ರಿಕೆ ಓದುವ ಹವ್ಯಾಸವು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಇದು ಕೇವಲ ಓದುವ ಅಭ್ಯಾಸವಲ್ಲ, ಬದಲಿಗೆ ಜ್ಞಾನದ ಕಿಟಕಿಯನ್ನು ತೆರೆಯುವ ಒಂದು ದಾರಿಯಾಗಿದೆ ಎಂದಿದ್ದಾರೆ
ಶಾಲಾ ಹಂತದಲ್ಲಿ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವುದು ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ದೊರೆಯುವ ದೊಡ್ಡ ಹೆಗ್ಗಳಿಕೆ. ಇದು ಕೇವಲ ಓದುವ ಅಭ್ಯಾಸವಲ್ಲ, ಬದಲಿಗೆ ನಮ್ಮ ಭಾಷೆಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಸೇತುವೆಯೂ ಹೌದು. ಕರ್ನಾಟಕದಲ್ಲೂ ಕೂಡ ಸರ್ಕಾರಿ ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಯೋಜನೆಯನ್ನು ಜಾರಿಗೆ ತರಬೇಕು ಎಂದು ಸರ್ಕಾರದ ಬಳಿ ಮನವಿ ಮಾಡುತ್ತೇನೆ ಎಂದಿದ್ದಾರೆ.
ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ದಿನಪತ್ರಿಕೆ ಓದುವುದು ಕಡ್ಡಾಯ!
ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು ಸುಧಾರಿಸಲು ಯೋಗಿ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಬಂದಿದೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶಗಳನ್ನು ಹೊರಡಿಸಿದ್ದು, ವಿದ್ಯಾರ್ಥಿಗಳು ಓದುವ ಶಕ್ತಿಯನ್ನು ಹೆಚ್ಚಿಸುವುದು ಮತ್ತು ಗ್ಯಾಜೆಟ್‌ಗಳ ವ್ಯಸನದಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಇದರಿಂದ ಬಚಾವ್​ ಮಾಡುವ ಉದ್ದೇಶ ಪರದೆಯ ಸಮಯವನ್ನು ಕಡಿಮೆ ಮಾಡುವುದಾಗಿದೆ.
ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಾರ್ಥಸಾರಥಿ ಸೇನ್ ಶರ್ಮಾ ಡಿಸೆಂಬರ್ 23 ರಂದು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರ ಪ್ರಕಾರ, ಪ್ರತಿದಿನ ಬೆಳಿಗ್ಗೆ ಶಾಲಾ ಸಭೆಯಲ್ಲಿ ಪತ್ರಿಕೆ ಓದಲು 10 ನಿಮಿಷಗಳ ಸಮಯವನ್ನು ನಿರ್ದಿಷ್ಟವಾಗಿ ನಿಗದಿಪಡಿಸಬೇಕು. ವಿದ್ಯಾರ್ಥಿಗಳು ರಾಷ್ಟ್ರೀಯ, ಅಂತರರಾಷ್ಟ್ರೀಯ, ಕ್ರೀಡೆ ಮತ್ತು ಸಂಪಾದಕೀಯ ಲೇಖನಗಳಿಂದ ಪ್ರಮುಖ ಅಂಶಗಳನ್ನು ಸರದಿ ಆಧಾರದ ಮೇಲೆ ಪಠಿಸಬೇಕಾಗುತ್ತದೆ. ಹಿಂದಿ ಮತ್ತು ಇಂಗ್ಲಿಷ್ ದಿನಪತ್ರಿಕೆಗಳನ್ನು ಶಾಲಾ ಸಂಸ್ಕೃತಿಯ ಅವಿಭಾಜ್ಯ ಅಂಗವನ್ನಾಗಿ ಮಾಡಬೇಕೆಂದು ಸರ್ಕಾರ ಸ್ಪಷ್ಟಪಡಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net