ಡಾ. ರಾಜ್‌ಕುಮಾರ್ ಹುಟ್ಟುಹಬ್ಬ ಆಚರಣೆ

ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬವನ್ನು  ಪಟ್ಟಣದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಕನ್ನಡದ ದ್ವಜ ಸ್ತಂಬದ ಹತ್ತಿರ ಕೇಕ್ ಕತ್ತರಿಸಿ ಆಚರಿಸಲಾಯಿತು.
ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬವನ್ನು ಪಟ್ಟಣದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಕನ್ನಡದ ದ್ವಜ ಸ್ತಂಬದ ಹತ್ತಿರ ಕೇಕ್ ಕತ್ತರಿಸಿ ಆಚರಿಸಲಾಯಿತು.
Published on
ಬೇಲೂರು: ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಕನ್ನಡದ ಧ್ವಜಸ್ತಂಭದ ಬಳಿ ಅಭಿಮಾನಿಗಳು ಶುಕ್ರವಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ತೀರ್ಥಂಕರ್ ಮಾತನಾಡಿ, ಅಣ್ಣಾವ್ರ ಕನ್ನಡಿಗರ ಹೃದಯದಲ್ಲಿ ಸದಾಕಾಲ ಜೀವಂತವಾಗಿರುವ ಮಹಾನ್ ವ್ಯಕ್ತಿ. ಅವರ ಸರಳತೆ, ಸಂಸ್ಕೃತಿ ಪ್ರೀತಿ ಮತ್ತು ಮಾನವೀಯ ಮೌಲ್ಯಗಳು ಎಲ್ಲರಿಗೂ ಆದರ್ಶವಾಗಿವೆ ಡಾ.ರಾಜ್‌ಕುಮಾರ್ ಅವರ 98ನೇ ವರ್ಷದ ಜಯಂತಿಯನ್ನು ಬೇಲೂರಿನ ಮುಖ್ಯ ರಸ್ತೆಯಲ್ಲಿರುವ ಕನ್ನಡದ ದ್ವಜಸ್ತಂಭದ ಸಮೀಪ ಆಚರಿಸುತ್ತಿದ್ದೇವೆ. ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗಿಯಾಗಿರುವುದು ನಮಗೆ ಸಂತೋಷ ತಂದಿದೆ. ಅವರಿಗೆ 100 ವರ್ಷ ತುಂಬಿದ ಸಂದರ್ಭದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಆಚರಿಸುವ ಉದ್ದೇಶ ಹೊಂದಿದ್ದೇವೆ ಎಂದರು.
ಡಾ.ರಾಜ್‌ಕುಮಾರ್ ಸಂಘದ ಪದಾಧಿಕಾರಿಗಳಾದ ಫಣೀಂದ್ರ, ಅಡುಗೆ ರವಿ, ಎಸ್‌ಬಿಐ ಮಂಜು, ಹೂ ಕುಮಾರ್, ಗಾಣಿಗರ ಸಂಘದ ಕಾರ್ಯದರ್ಶಿ ಅನಂತು, ವಿಜಯಲಕ್ಷ್ಮೀ, ಸಿದ್ದೇಗೌಡ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net