ಬೆಂಗಳೂರು: ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಕೇಂದ್ರ ಘಟಕದ ಉಪಾಧ್ಯಕ್ಷರಾಗಿ ಬೆಂಗಳೂರಿನ ಡಾ. ಎಸ್. ಶ್ರೀನಿವಾಸ್ ಆಯ್ಕೆಯಾಗಿದ್ದಾರೆ. 2026-27ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಸರ್ವಾನುಮತದಿಂದ ಚುನಾಯಿತರಾಗಿದ್ದಾರೆ. 2023-24ನೇ ಸಾಲಿಗೆ ಐಎಂಎ ಕರ್ನಾಟಕ ಶಾಖೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಶ್ರೀನಿವಾಸ್, ರಾಜ್ಯ ಘಟಕದ ಉತ್ತಮ ಅಧ್ಯಕ್ಷ ಪ್ರಶಸ್ತಿಗೂ ಅವರು ಭಾಜನರಾಗಿದ್ದರು. ಐಎಂಎಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.