ಸಾರಸ್ವತ ಲೋಕಕ್ಕೆ ಡಾ.ವಿಜಯ ದಬ್ಬೆ ಕೊಡುಗೆ ಅಪಾರ

ಬೇಲೂರಿನಲ್ಲಿ ಆಯೋಜಿಸಿದ್ದ ಸಾಹಿತಿ ಡಾ.ವಿಜಯ ದಬ್ಬೆ ಜಯಂತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಬೇಲೂರಿನಲ್ಲಿ ಆಯೋಜಿಸಿದ್ದ ಸಾಹಿತಿ ಡಾ.ವಿಜಯ ದಬ್ಬೆ ಜಯಂತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ
  • ಸರ್ವೋದಯ ಕಾಲೇಜಿನಲ್ಲಿ
ಬೇಲೂರು: ಗ್ರಾಮೀಣ ಭಾಗದಲ್ಲಿ ಜನಿಸಿದ ಲೇಖಕಿ ಡಾ.ವಿಜಯ ದಬ್ಬೆ ಅವರು ಸಾರಸ್ವತ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದು, ಸಾಹಿತಿ, ಲೇಖಕಿಯಾಗಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಹೇಳಿದರು.
ಪಟ್ಟಣದ ಸರ್ವೋದಯ ಕಾಲೇಜಿನಲ್ಲಿ ಇತ್ತೀಚೆಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಆಯೋಜಿಸಿದ್ದ ಸಾಹಿತಿ ಡಾ.ವಿಜಯ ದಬ್ಬೆ ಜಯಂತಿಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ದಬ್ಬೆ ಅವರಂತೆ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸದೊಂದಿಗೆ ನಾಡಿಗೆ ಕೀರ್ತಿ ತರುವಂತಾಗಬೇಕು. ಜತೆಗೆ ಕಸಾಪದಿಂದ ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಸನ್ಮಾನಿಸುತ್ತಿರುವುದು ಖುಷಿ ತಂದಿದೆ ಎಂದರು
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪ ತಾಲೂಕು ಅಧ್ಯಕ್ಷ ಮಾ.ನಾ.ಮಂಜೇಗೌಡ, ಡಾ.ವಿಜಯ ದಬ್ಬೆ ಅವರು ತಾಲೂಕಿನ ಹೆಮ್ಮೆಯ ಸಾಹಿತಿ. ದಬ್ಬೆ ಗ್ರಾಮದಲ್ಲಿ ಜನಿಸಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಗ್ರಾಮೀಣ ಶಾಲೆಯಲ್ಲಿ ಪಡೆದು ನಂತರ ಮಾನಸ ಗಂಗೋತ್ರಿಯಲ್ಲಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಲೇಖಕಿಯಾಗಿ, ಮಹಿಳಾ ಪರ ಹೋರಾಟಗಾರ್ತಿಯಾಗಿದ್ದರು ಎಂದರು.
ಸರ್ವೋದಯ ಕಾಲೇಜು ಪ್ರಾಂಶುಪಾಲ ಮಲ್ಲೇಶ್‌ಗೌಡ ಮಾತನಾಡಿ, ವಿಜಯ ದಬ್ಬೆ ಅವರು ಕನ್ನಡ ಭಾಷೆಯನ್ನು ಮನ ಮುಟ್ಟುವಂತೆ ಬೋಧಿಸುತ್ತಿದ್ದರು. ಅವರ ಶಿಷ್ಯರಾಗಿ ಕಲಿತಿರುವುದು ನನಗೆ ಹೆಮ್ಮೆ ತಂದಿದೆ ಎಂದರು.
ಸಂಶೋಧಕ ಡಾ.ಶ್ರೀವತ್ಸ ವಟಿ, ಉದ್ಯಮಿ ಗುರುಪಾದಸ್ವಾಮಿ, ಕಸಾಪ ಹೋಬಳಿ ಘಟಕದ ಅಧ್ಯಕ್ಷೆ ಕಮಲಾ ಚನ್ನಪ್ಪ, ಗೌರವ ಸಲಹೆಗಾರ ಮಾ.ಶಿವಮೂರ್ತಿ, ಮಾಜಿ ಅಧ್ಯಕ್ಷ ರಾಜೇಗೌಡ, ಉಪಾಧ್ಯಕ್ಷ ಚಂದ್ರು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net