ಗೌರಿಬಿದನೂರು: ಸಾಂಕ್ರಾಮಿಕ ರೋಗಗಳಿಂದ ದೂರ ಉಳಿದು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಶುದ್ಧ ನೀರು ಸೇವಿಸಿ ಎಂದು ಡಾ.ಮಮತಾ ಹೇಳಿದರು.clean water
ತಾಲೂಕಿನ ತೊಂಡೆಬಾವಿ ವಲಯದ ಅಲಿಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಹಮ್ಮಿಕೊಂಡಿದ್ದ ಜಾಗೃತಿ ಕುರಿತ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿ, ಮನುಷ್ಯ ವೈಯಕ್ತಿಕ ಸ್ವಚ್ಛತೆಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ನೀರಿನ ಮಿತ ಬಳಕೆ ಜತೆಗೆ ಶುದ್ಧ ನೀರು ಬಳಕೆ ಮಾಡಬೇಕು. ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಇಲ್ಲವಾದಲ್ಲಿ ಸೊಳ್ಳೆಗಳ ಸಂತಾನಾಭಿವೃದ್ಧಿ ಹೆಚ್ಚಾಗಿ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ ಎಂದರು.
ಗ್ರಾಪಂ ಮಾಜಿ ಅಧ್ಯಕ್ಷೆ ನಾಗರತ್ನಮ್ಮ, ವೈದ್ಯೆ ಡಾ.ಮಮತಾ ತಮಟೆ ಭಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೀದಿನಾಟಕದ ಮೂಲಕ ಜನರಲ್ಲಿ ನೀರಿನ ಸದ್ಭಳಕೆ, ಸ್ವಚ್ಛತೆ, ಆರೋಗ್ಯ ಜಾಗೃತಿ, ವಿವಿಧ ವಿಷಯಗಳ ಬಗ್ಗೆ ಗ್ರಾಮೀಣ ಕಲಾ ತಂಡದವರು ಜಾಗೃತಿ ಮೂಡಿಸಿದರು.