ಚಿಂಚೋಳಿ : ಸುಲೇಪೇಟ ಗ್ರಾಮದಲ್ಲಿ ಹನಿ ನೀರಿಗಾಗಿ ಜನರು ಪರದಾಡುತ್ತಿದ್ದು, ಶ್ರೀ ವೀರಭದ್ರೇಶ್ವರ ದೇವಸ್ಥಾನ, ಸರಗರ ಓಣಿ, ವಾಲಿಕರ ಓಣಿ, ಭಡಕಲ್ ನಗರ ಸೇರಿ ಅನೇಕ ಓಣಿಗಳಲ್ಲಿ 4&5 ದಿನಗಳಿಗೊಮ್ಮೆಯೂ ನೀರು ಬರುತ್ತಿಲ್ಲ.
ಇದೀಗ ಬೇಸಿಗೆ ಆರಂಭವಾಗಿದ್ದು, ಈಗಲೇ ಜಲ ಸಮಸ್ಯೆ ಹೆಚ್ಚಾಗಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂ ಯೋಜನೆಗಳಲ್ಲಿ ಒಂದಾದ ಜಲಜೀವನ ಮಿಷನ್ ಮೂಲಕ ಪ್ರತಿ ಮನೆಗೂ ಕುಡಿವ ನೀರು ಪೂರೈಸುವ ಭರವಸೆ ನೀಡಲಾಗಿತ್ತು. ಆದರೆ ಈವರೆಗೂ ಕಾಮಗಾರಿ ಪೂರ್ಣವಾಗಿಲ್ಲ. ಕೆಲ ಓಣಿಗಳಲ್ಲಿ ಕಾಮಗಾರಿ ಅಪೂರ್ಣವಾಗದಿದೆ. ಪೈಪ್ಲೈನ್ ಕೆಲಸವೂ ಆಗಿಲ್ಲ. ಇದರು ಜನರಲ್ಲಿ ಆಕ್ರೋಶ ಮೂಡಿಸಿದ್ದು, ಸ್ಥಳಿಯ ಆಡಳಿತದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
ಸಂಬಂಧಪಟ್ಟವರು ಕೂಡಲೇ ಗಮನಹರಿಸಿ ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳಿಯರ ಒತ್ತಾಯವಾಗಿದೆ.
"
ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಪ್ರತಿ ಗ್ರಾಮದಲ್ಲಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೆದ್ದೇವೆ. ಸುಲೇಪೇಟ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಗಮನಕ್ಕೆ ಬಂದಿದ್ದು, ತಣವೇ ಪರಿಹಾರ ಕಲ್ಪಿಸಲಾಗುವುದು.