15 ದಿನಗಳ ಒಳಗಾಗಿ ಕೇಂದ್ರಕ್ಕೆ ಬರ ಪರಿಸ್ಥಿತಿ ವರದಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Published on
ಬೆಂಗಳೂರು : ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರಕ್ಕೆ 15 ದಿನಗಳಲ್ಲಿ ವರದಿ ಸಲ್ಲಿಸಬೇಕಿರುವುದರಿಂದ ಸ್ಥಳಕ್ಕೆ ಭೇಟಿ ಕೊಟ್ಟು ವಾಸ್ತವಾಂಶ ಸಿದ್ಧಪಡಿಸಬೇಕೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅಧಿಕಾರಿಗಳಿಗೆ ಕಡಕ್ ಎಚ್ಚರಿಕೆ ನೀಡಿದರು.
ವಿಧಾನಸೌಧದಲ್ಲಿ ಭಾನುವಾರ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಡಿಸಿಎಂ ಡಾ.ಜಿ. ಪರಮೇಶ್ವರ ಸಭೆ ನಡೆಸಿ ಸಲಹೆ ಸೂಚನೆಗಳನ್ನು ಕೊಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಸಿದರು.
ಡಿಸಿ, ಸಿಇಒಗಳು ತ್ವರಿತವಾಗಿ ಸಮಗ್ರ ಮಾಹಿತಿ ಸಂಗ್ರಹಿಸಿ ಕಳುಹಿಸಬೇಕು. ಪೇಪರ್‌ನಲ್ಲಿ ಎಲ್ಲಾ ಸರಿಯಾಗಿದೆ ಎನ್ನುವ ವರದಿ ನೀಡಿದರೆ ನಾನು ಕೇಳುವುದಿಲ್ಲ. ಫೀಲ್ಡ್ ರಿಪೋರ್ಟ್ ನನಗೆ ಸಿಗುತ್ತದೆ. ನನಗೆ ಸಿಗುವ ವರದಿ ಮತ್ತು ಅಧಿಕಾರಿಗಳು ಕೊಡುವ ವರದಿಯಲ್ಲಿ ವ್ಯತ್ಯಾಸ ಇರಬಾರದು. ಸರ್ಕಾರ ಅಗತ್ಯ ಇರುವ ಎಲ್ಲ ಅನುಕೂಲ,
ಅನುದಾನಗಳನ್ನು ಹೇರಳವಾಗಿ ಕೊಡುತ್ತಿದೆ. ಇಷ್ಟಾದ ನಂತರವೂ ಕರ್ತವ್ಯಲೋಪದಿಂದ ಯಾವುದೇ ಜಿಲ್ಲೆಯಲ್ಲಿ ಅನಾಹುತ ಸಂಭವಿಸಿದರೆ ಡಿಸಿ ಮತ್ತು ಸಿಇಒಗಳೇ ಜವಾಬ್ದಾರಿ ಹೊರಬೇಕಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net