ಡಿ.ಕೆ. ಶಿವಕುಮಾರ್‌ಗೆ 1,400 ಕೋಟಿ ರೂ. ಎಲ್ಲಿಂದ ಉದುರಿತು ? ಎಂದು ಕೇಳುತ್ತಿರುವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಚಲುವರಾಯಸ್ವಾಮಿ, ಮುಖ್ಯಮಂತ್ರಿ ಮೊದಲಿನಿಂದಲೂ ಬ್ಯುಸಿನೆಸ್‌ಮೆನ್, ಅವರಿಗೆ ರಾಜಕಾರಣ ಒಂದು ಪ್ಯಾಶನ್ ಅಷ್ಟೇ. ಆದರೆ, ಎಚ್.ಡಿ. ದೇವೇಗೌಡರನ್ನು ಹೊರತುಪಡಿಸಿ ನಿಮ್ಮ ಇಡೀ ಕುಟುಂಬದ ಆಸ್ತಿಯನ್ನು ಘೋಷಣೆ ಮಾಡಲು ನೀವು ಸಿದ್ಧರಿದ್ದೀರಾ ? ನಿಮ್ಮ ಕುಟುಂಬದಲ್ಲಿ ಎಷ್ಟು ಆಸ್ತಿ ಇದೆ. ಅದು ಎಲ್ಲಿಂದ ಬಂತು ಎಂದು ಸ್ವಯಂ ತನಿಖೆಗೆ ಒಳಪಡಿಸಿಕೊಳ್ಳಿ ಎಂದು ಸವಾಲು ಹಾಕಿದರು.