ಎಸ್​ಐಆರ್ ಪ್ರಕ್ರಿಯೆ ವೇಳೆ ಹೃದಯಾಘಾತ: ಪ್ರತ್ಯೇಕ ಸ್ಥಳಗಳಲ್ಲಿ ಇಬ್ಬರೂ ಬಿಎಲ್‌ಒಗಳು ದುರ್ಮರಣ!

ಹೃದಯಾಘಾತಕ್ಕೆ ಮೃತಪಟ್ಟ ಬಿಎಲ್​ಒಗಳು
ಹೃದಯಾಘಾತಕ್ಕೆ ಮೃತಪಟ್ಟ ಬಿಎಲ್​ಒಗಳು
Published on

ಪ್ರಮುಖ ಮುಖ್ಯಾಂಶಗಳು

  • ಎಸ್​ಐಆರ್​ ಪ್ರಕ್ರಿಯೆಗೆ ಹೋಗಿದ್ದ ಬಿಎಲ್​ಓಗಳು ಹೃದಯಾಘಾತಕ್ಕೆ ಬಲಿ
  • ಇಬ್ಬರೂ ಬಿಎಲ್​ಓಗಳು ಪ್ರತ್ಯೇಕ ಸ್ಥಳಗಳಲ್ಲಿ ದುರ್ಮರಣ
ಬೀದರ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸರ್ವೆ ಕಾರ್ಯಕ್ಕೆ ತೆರಳಿದ್ದ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ಸಂಭವಿಸಿದೆ.
ಭಾಲ್ಕಿ ತಾಲೂಕಿನ ಸುನೀಲ್ (48) ಮೃತ ಬಿಎಲ್​ಒ. ಕಳೆದ ಹಲವು ದಿನಗಳಿಂದ ಎಸ್ಐಅರ್ ಕಾರ್ಯದಲ್ಲಿ ಸಕ್ರಿಯರಾಗಿದ್ದ ಸುನೀಲ್, ಅಮಲಾಪುರ ಗ್ರಾಮದ 33ನೇ ಬೂತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಕೆಲಸಕ್ಕೆ ಬಂದಿದ್ದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಕುಸಿದು ಸಾವನ್ನಪ್ಪಿದ್ದಾರೆ. ಸ್ಥಳೀಯರು ಕೂಡಲೇ ಸುನೀಲ್​ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸ್ಟಂಟ್ ಅಳವಡಿಸುವ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಬ್ಬ ಬಿಎಲ್​ಒ ಕೂಡ ಮೃತ

ಇನ್ನು, ಬೆಂಗಳೂರಿನಲ್ಲಿಯೂ ಎಸ್​ಐಆರ್​ ಪ್ರಕ್ರಿಯೆಗೆ ತೆರಳುತ್ತಿದ್ದ ಮತ್ತೊಬ್ಬ ಬಿಎಲ್​ಒ ಕೂಡ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಟರಾಜ್ ಎಂಬುವವರು ಬೆಳಗ್ಗೆ ಮನೆಯಿಂದ ಹೊರಟ್ಟಿದ್ದ ಸಂದರ್ಭದಲ್ಲಿ ಹಠಾತ್​ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೇ ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net