ಗ್ರಾಮೀಣ ಜನರಿಗೆ ತೊಂದರೆ ಆಗದ ರೀತಿಯಲ್ಲಿ ಮತ್ತು ಸರ್ಕಾರದ ಆಸ್ತಿ (ಖರಾಬು, ಗೋಮಾಳ ಇತ್ಯಾದಿ) ಗಳನ್ನು ಸಂರಕ್ಷಿಸಿಕೊಂಡು ಸ್ವಾಧೀನದಲ್ಲಿ ಇರುವವರಿಗೆ ಖಾತಾ ನೀಡಲು ನಿರ್ಧಾರ ಮಾಡಲಾಗಿದೆ. ನಮೂನೆ 11ಬಿಯಲ್ಲಿ ಆಸ್ತಿಗಳಿಗೆ ಅರ್ಜಿ ಸಲ್ಲಿಸಲು, ಸೆಪ್ಟೆಂಬರ್‌ವರೆಗೆ ಕಾಲಾವಕಾಶ ವಿಸ್ತರಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಗ್ರಾಮೀಣ ಜನರು ಸದುಪಯೋಗ ಪಡೆಯಬೇಕು. ಈವರೆಗೆ 10.16 ಲಕ್ಷ ಆಸ್ತಿಗಳಿಗೆ ಬಿ ಖಾತಾ ನೀಡಲಾಗಿದೆ. 90 ಲಕ್ಷ ಆಸ್ತಿಗಳಿಗೆ ಎ ಮತ್ತು ಬಿ ಖಾತಾ ನೀಡಬೇಕಾಗಿದೆ ಎಂದು ವಿವರಿಸಿದರು.