ಶ್ರೀನಿವಾಸಪುರ: ವಿದ್ಯಾರ್ಥಿಗಳು ಪಾಠದ ಜತೆಗೆ ಮಾನವೀಯ ಮೌಲ್ಯ ಮೈಗೂಡಿಸಿಕೊಂಡು ದಾನಿಗಳ ಸಾಹಕಾರ ಪಡೆದು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಪಾಲಕರಿಗೆ ಕೀರ್ತಿ ತರಬೇಕು ಎಂದು ಮಾಸ್ತೆನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ರವಿಕುಮಾರ್ ತಿಳಿಸಿದರು.parents
ತಾಲೂಕಿನ ಬಂಗವಾದಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾರದಾ ಪೂಜೆಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆತ್ಮಸ್ಥೆ$ರ್ಯ ತುಂಬಿ ಪರೀಕ್ಷೆ ಎದುರಿಸಲು ಶುಭ ಕೋರಿದರು.
ಗ್ರಾಮದ ಮುಖಂಡ ಮತ್ತು ರೈತ ಸಂಘದ ರಾಜ್ಯ ಸಂಚಾಲಕ ನಾಗರಾಜ್ ಗೌಡ ಮಾತನಾಡಿ, 7ನೇ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ 1 ಸಾವಿರ ನಗದು ನೀಡಿ, ಪ್ರಮಾಣ ಪತ್ರ ವಿತರಿಸಿ ಗೌರವಿಸಲಾಗುವುದು ಎಂದು ಹೇಳಿದರು.
ಬಿ.ಎಂ.ರವಿಕುಮಾರ್, ಎಸ್ಡಿಎಂಸಿ ಅಧ್ಯಕ್ಷ ಎಳೆಗೌಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಲೇಖನಿ ಸಾಮಗ್ರಿ ಕೊಡುಗೆಯಾಗಿ ನೀಡಿದರು.
ಶಾಲಾ ಮುಖ್ಯಶಿಕ್ಷಕಿ ಮುನಿಲಕ್ಷ$್ಮಮ್ಮ ಮಾತನಾಡಿ, ಗ್ರಾಮಸ್ಥರು ಮತ್ತು ಎಸ್ಡಿಎಂಸಿ ಸದಸ್ಯರ ಸಹಕಾರದಿಂದ ನೂತನ ಶಾಲಾ ಕೊಠಡಿ ನಿಮಾರ್ಣವಾಯಿತು. ದಾಖಲಾತಿಯೂ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಉಳಿಯಲು ನಿಮ್ಮ ಸಹಕಾರ ಮುಂದುವರಿಯಲಿ ಎಂದರು.