ಗ್ರಾಮ ಪಂಚಾಯಿತಿ ಸೇವೆಗಳಿಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ದಾಖಲಿಸಲು ಗ್ರಾಮೀಣ ಭಾಗದ ಜನರಿಗೆ ಅನುವಾಗುವಂತೆ ಡ್ಯಾಶ್ ಬೋರ್ಡ್ ಆಧಾರಿತ ‘ದೂರು-ದಾಖಲು ಇತ್ಯರ್ಥ್ಯಕ್ಕೆ ಆನ್ಲೈನ್ ವ್ಯವಸ್ಥೆ’ ರೂಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಇಲಾಖೆಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಖಂಡ್ರೆ, ಇ-ಸ್ವತ್ತು, ತೆರಿಗೆ ನಿರ್ಧಾರ, ಸಾಮಾಜಿಕ ಅರಣ್ಯೀಕರಣ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ನಿರ್ವಹಣೆ, ಕುಡಿಯುವ ನೀರು, ನೈರ್ಮಲ್ಯ, ಗ್ರಾಮೀಣ ರಸ್ತೆ, ವಿಬಿ-ಜಿರಾಮ್ ಯೋಜನೆ ಸೇರಿದಂತೆ ಯಾವುದೇ ಅಹವಾಲನ್ನು ಗ್ರಾಮೀಣರು ದಾಖಲಿಸಲು ಮತ್ತು ಅದಕ್ಕೆ ತಕ್ಷಣ ಸ್ಪಂದಿಸಲು ಈ ವ್ಯವಸ್ಥೆ ರೂಪಿಸುವಂತೆ ನಿರ್ದೇಶನ ನೀಡಿದ್ದಾರೆ. ಗ್ರಾಮೀಣ ಭಾಗದ ಜನರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ, ನಿಜಕ್ಕೂ ಇದೊಂದು ಉತ್ತಮ ಹೆಜ್ಜೆ.