ವಿದ್ಯಾರ್ಥಿಗಳ ಸಾರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅವಶ್ಯ

Education is essential for the all-round development of students.
Education is essential for the all-round development of students.
Published on
ಪಾವಗಡ: ಪಾವಗಡ ಬರಪೀಡಿತ, ಹಿಂದುಳಿದ ತಾಲೂಕು ಎಂದು ಹಣೆಪಟ್ಟಿ ಪಡೆದಿದ್ದು, ಇಂತಹ ಪ್ರದೇಶದಲ್ಲಿ ಇಲ್ಲಿನ ಮಕ್ಕಳು ಕಡಿಮೆ ಖರ್ಚಿನಲ್ಲಿ ಉತ್ತಮ ವ್ಯಾಸಂಗ ಮಾಡಲಿ ಎಂಬ ಉದ್ದೇಶವಿರಿಸಿಕೊಂಡು ಶಿಕ್ಷಣ ಸಂಸ್ಥೆ ಪ್ರಾರಂಭಿಸಿದೆ ಎಂದು ವೈದ್ಯ ಡಾ.ಜಿ ವೆಂಕಟರಾಮಯ್ಯ ತಿಳಿಸಿದರು.
ಪಟ್ಟಣದ ಸ್ವಾಮಿ ವಿವೇಕಾನಂದ ಕಾಲೇಜು ಅವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಪಾವಗಡ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್​ ಸಂಯುಕ್ತಾಶ್ರಯದಲ್ಲಿ 2025-&26ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ತಾಲೂಕು ಮಟ್ಟದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳ ಸಾರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅವಶ್ಯವಾಗಿದ್ದು, ತಾಲೂಕಿನ ಪ್ರತಿ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನ ಅಲಂಕಾರಿಸಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ಮಾತನಾಡಿ, ವಿದ್ಯೆಯು ಸಾಧಕನ ಸ್ವತ್ತೆ ಹೊರತು ಸೋಮರಿಗಳ ಸ್ವತ್ತಲ್ಲ, ಸಾಧಿಸುವ ಛಲ ವಿದ್ಯಾರ್ಥಿಗಳಲ್ಲಿ ಇರಬೇಕು, ಸಮಯವನ್ನು ವ್ಯರ್ಥ ಮಾಡದೇ ಶ್ರಮ ವಹಿಸಿ ಅಧ್ಯಯನ ನಡೆಸಬೇಕು ಎಂದು ತಿಳಿಸಿದರು.
ತಾಲೂಕು ಕಸಾಪ ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ಮಾತನಾಡಿ, 10ನೇ ತರಗತಿ ವಿದ್ಯಾರ್ಥಿಗಳಿಗೆ ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ಪರೀಕ್ಷಾ ದೃಷ್ಠಿಯಿಂದ ಅತ್ಯುಪಯುಕ್ತವಾಗಿವೆ ಎಂದು ತಿಳಿಸಿದರು.
ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ 5,000 ರೂ,, ದ್ವೀತಿಯ ಬಹುಮಾನ 3000 ರೂ., ತೃತೀಯ ಬಹುಮಾನವಾಗಿ 2000 ನಗದು ಬಹುಮಾನ ನೀಡಲಾಯಿತು.
ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನಾಗೇಂದ್ರ, ನಾಗರಾಜ್​, ಚಂದ್ರಶೇಖರ್​, ನೋಡೆಲ್​ ಅಧಿಕಾರಿ ಖಾಜಾ ಹುಸೇನ್​, ಸಹನಾ ಶಾಲೆಯ ಕಾರ್ಯದರ್ಶಿ ಶ್ರೀನಿವಾಸ್​ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net