ದೊಡ್ಡಬಳ್ಳಾಪುರ : ಶಿಕ್ಷಣವು ಬದುಕಿನ ಯಶಸ್ಸಿನ ದೊಡ್ಡ ಸಾಧನ. ಆದರೆ ನಿರಂತರ ಪ್ರಯತ್ನ, ಛಲ, ಧೃಡ ಸಂಕಲ್ಪದಿಂದ ಶಿಕ್ಷಣದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ನರೇಶ್ ತಿಳಿಸಿದರು.
ನಗರದ ಕೋರ್ಟ್ ರಸ್ತೆಯ ಖಾಸಗಿ ಸಭಾಂಗಣದಲ್ಲಿ ಛಲವಾದಿ ಮಹಾಸಭಾದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು ಹಾಗೂ ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಿದರೆ ಜೀವನದಲ್ಲಿ ಉನ್ನತಸ್ಥಾನಕ್ಕೇರಬಹುದು. ಸಮಾಜದಲ್ಲಿ ಉತ್ತಮ ಸ್ಥಾನಮಾನ, ಆತ್ಮವಿಶ್ವಾಸ ಹಾಗೂ ಸ್ವಾವಲಂಬಿ ಬದುಕನ್ನು ರೂಪಿಸುವ ಶಕ್ತಿ ಶಿಕ್ಷಣಕ್ಕಿದೆ ಎಂದರು.
ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಫ್ರೋತ್ಸಾಹಿಸುವುದರಿಂದ ಅವರು ಜೀವನದಲ್ಲಿ ಮತ್ತಷ್ಟು ಯಶಸ್ಸುಗಳಿಸಲು ಪ್ರೇರೇಪಿಸಿದಂತಾಗುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮುದಾಯದ ಜವಾಬ್ದಾರಿ. ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಸ್ಫೂರ್ತಿ ನೀಡುತ್ತವೆ ಎಂದರು. ಸಮುದಾಯ ಏಳಿಗೆಗೆ ಶ್ರಮವಹಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀೆಯಲ್ಲಿ ಉತ್ತಮ ಸಾಧನೆ ಮಾಡಿದ ನೂರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.