ಶಿಕ್ಷಣವೇ ಸಮಾಜದ ಪ್ರಗತಿಯ ಮೂಲ

ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶವಂತ್ರಾಯಗೌಡ ಪಾಟೀಲ ಚಾಲನೆ ನೀಡಿದರು. ಬಿ.ಎಸ್. ಕಡಕಭಾವಿ, ಭೀಮಣ್ಣ ಕವಲಗಿ, ಪ್ರಶಾಂತ ಕಾಳೆ ಇದ್ದರು.
ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶವಂತ್ರಾಯಗೌಡ ಪಾಟೀಲ ಚಾಲನೆ ನೀಡಿದರು. ಬಿ.ಎಸ್. ಕಡಕಭಾವಿ, ಭೀಮಣ್ಣ ಕವಲಗಿ, ಪ್ರಶಾಂತ ಕಾಳೆ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿಕೆ
  • ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
  • 34.05 ಕೋಟಿ ರೂ.ವೆಚ್ಚದಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣ
  • ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ, ಸುರಕ್ಷಿತ ವಸತಿ , ಉತ್ತಮ ಭವಿಷ್ಯ ನೀಡುವ ಉದ್ದೇಶ
ಇಂಡಿ: ಶೈಕ್ಷಣಿಕ ಅಭಿವೃದ್ಧಿಯಾದಾಗ ಮಾತ್ರ ದೇಶ ಅಭಿವೃದ್ಧಿ ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಮತಕ್ಷೇತ್ರದಲ್ಲಿ ಹಲವು ಸರ್ಕಾರಿ ಪ್ರೌಢಶಾಲೆಗಳು, ಕಾಲೇಜ್‌ಗಳನ್ನು ಮಂಜೂರು ಮಾಡಿಸಿದ್ದೇನೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ತಾಲೂಕಿನ ಹಳಗುಣಕಿ ಗ್ರಾಮದಲ್ಲಿ 34.05 ಕೋಟಿ ರೂ.ವೆಚ್ಚದಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ, ಸುರಕ್ಷಿತ ವಸತಿ ಹಾಗೂ ಉತ್ತಮ ಭವಿಷ್ಯ ನಿರ್ಮಾಣದ ಉದ್ದೇಶದಿಂದ ಕಾರ್ಮಿಕ ವಸತಿ ಶಾಲೆ ನಿರ್ಮಾಣವಾಗುತ್ತಿದೆ. ಈ ಭಾಗದ ಅನೇಕ ಕುಟುಂಬಗಳಿಗೆ ಈ ಶಾಲೆ ಆಶಾಕಿರಣವಾಗಲಿದೆ. ಶಿಕ್ಷಣವೇ ಸಮಾಜದ ಪ್ರಗತಿಯ ಮೂಲ. ಆರ್ಥಿಕವಾಗಿ ಹಿಂದುಳಿದ ಕಾರ್ಮಿಕ ಕುಟುಂಬಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬುದು ನಮ್ಮ ಆಶಯವಾಗಿದೆ. ಈ ವಸತಿ ಶಾಲೆ ಮಕ್ಕಳ ಪ್ರತಿಭೆ ಹೊರಹೊಮ್ಮಲು ಹಾಗೂ ಅವರ ಕನಸುಗಳಿಗೆ ಬಲ ತುಂಬಲು ಉತ್ತಮ ವೇದಿಕೆಯಾಗಲಿದೆ ಎಂದರು.
ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಆ ಪ್ರತಿಭೆಯನ್ನು ವೇದಿಕೆಗೆ ತರುವ ಪ್ರಯತ್ನ ಶಿಕ್ಷಕರು ಮಾಡಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವನ್ನು ನೀಡಬೇಕೆಂದರು.
ತಹಸೀಲ್ದಾರ ಬಿ.ಎಸ್. ಕಡಕಭಾವಿ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಗ್ಯಾರಂಟಿ ಯೋಜನೆಗಳ ತಾಲೂಕಾ ಅಧ್ಯಕ್ಷ ಪ್ರಶಾಂತ ಕಾಳೆ, ಬಿ.ಸಿ. ಸಾಹುಕಾರ, ಜಾವೀದ್ ಮೋಮಿನ್, ಕಲ್ಲನಗೌಡ ಪಾಟೀಲ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net