ತಾಂತ್ರಿಕ ಕೌಶಲ ವೃದ್ಧಿಸುವ ಶಿಕ್ಷಣ ಅಗತ್ಯ

Education to enhance technical skills is necessary
Education to enhance technical skills is necessary
Published on
ಶಿಡ್ಲಟ್ಟ : ಮಕ್ಕಳಿಗೆ ರೋಬೋಟಿಕ್ಸ್​ ಕಲಿಕೆಯು ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್​ ಮತ್ತು ಗಣಿತ ವಿಷಯಗಳಲ್ಲಿ ಆಸಕ್ತಿ ಮೂಡಿಸುತ್ತದೆ ಮತ್ತು ತರ್ಕಬದ್ಧ ಚಿಂತನೆ ಬೆಳೆಸುತ್ತದೆ. ಇದು ಸೃಜನಶೀಲತೆ ಮತ್ತು ಸಮಸ್ಯೆ ಪರಿಹಾರದ ಕೌಶಲ ಬಲಪಡಿಸುತ್ತದೆ ಎಂದು ಹಿಂದೂ ಸಮಾಜೋತ್ಸವ ಸಮಿತಿ ಅಧ್ಯಕ್ಷ ಎಸ್​.ಪ್ರಕಾಶ್​ ತಿಳಿಸಿದರು.
ನಗರದ ಶಾರದಾ ವಿದ್ಯಾಸಂಸ್ಥೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ರೋಬೋಟಿಕ್​ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ರೋಬೋಟಿಕ್ಸ್​ಅನ್ನು ಪ್ರಾಥಮಿಕ ತರಗತಿಯಿಂದ ಶಾರದಾ ವಿದ್ಯಾಸಂಸ್ಥೆಯಲ್ಲಿ ಮಕ್ಕಳಿಗೆ ಒಂದು ವಿಷಯವಾಗಿ ಕಲಿಸುತ್ತಿರುವುದು ಅನುಕರಣೀಯ.ನಗರದಲ್ಲಿನ ಶಿಕ್ಷಣದ ರೀತಿಯಲ್ಲಿ ಗ್ರಾಮಾಂತರ ಭಾಗದಲ್ಲಿಯೂ ತಾಂತ್ರಿಕ ಕೌಶಲ ವೃದ್ಧಿಸುವ ಶಿಕ್ಷಣದ ಮೂಲಕ ಮಕ್ಕಳಲ್ಲಿ ನಾವೀನ್ಯತೆಯನ್ನು ಬೆಳೆಸಲಾಗುತ್ತಿದೆ. ಇದು ಡಿಜಿಟಲ್​ ಮಕ್ಕಳಲ್ಲಿ ಕೌಶಲ್ಯಗಳನ್ನು ಬಲಪಡಿಸಿ, ಅವರನ್ನು ಭವಿಷ್ಯದ ಉದ್ಯೋಗಗಳಿಗೆ ಸಜ್ಜುಗೊಳಿಸುತ್ತದೆ. ಮೇಕ್​ ಇನ್​ ಇಂಡಿಯಾ ಯೋಜನೆಗೆ ಇದು ಪೂರಕವಾಗಿದೆ. ಈ ಮಕ್ಕಳು ಮುಂದೆ ದೇಶದ ಆಸ್ತಿಗಳಾಗುತ್ತಾರೆ ಎಂದರು.
ಶಾರದಾ ವಿದ್ಯಾಸಂಸ್ಥೆ ಕಾರ್ಯದರ್ಶಿ ಶ್ರೀಕಾಂತ್​ ಮಾತನಾಡಿ, 2 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಯುವಿಪೆಪ್​ ಸಂಸ್ಥೆ ಮೂಲಕ ರೋಬೋಟಿಕ್ಸ್​ ಕಲಿಸಲಾಗುತ್ತಿದೆ. ಕಲಿತಿರುವ ಜ್ಞಾನವನ್ನು ಮಕ್ಕಳು ಸುಮಾರು 35ಕ್ಕೂ ಹೆಚ್ಚು ಮಾದರಿಗಳ ಮೂಲಕ ಪ್ರದರ್ಶಿಸಿದ್ದಾರೆ ಎಂದರು.
ಶಾರದಾ ವಿದ್ಯಾಸಂಸ್ಥೆ ಅಧ್ಯಕ್ಷ ಎ.ಆರ್​.ಮುನಿರತ್ನಂ, ಎ.ಆರ್​.ಎಂ ಪಿಯು ಕಾಲೇಜಿನ ಪ್ರಾಂಶುಪಾಲ ಮೂರ್ತಿ ಸಾಮ್ರಾಟ್​, ಮುಖ್ಯಶಿಕ್ಷಕರಾದ ರಾಜೇಶ್​, ಸಿದ್ಧರಾಜು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net