ವಿದ್ಯಾರ್ಥಿಗಳ ಸುರಕ್ಷತೆ, ಮಾನಸಿಕ ಆರೋಗ್ಯ ರಕ್ಷಣೆ ಮತ್ತು ಸಾಂಸ್ಥಿಕ ಉತ್ತರದಾಯಿತ್ವವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯು ಈ ಸೂಚನೆ
ವಸತಿ ಸಹಿತ ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್, ಹಾಸ್ಟೆಲ್, ಪಿಜಿ ಸೇರಿ ಒಂದು ಕಿ.ಮೀ ವ್ಯಾಪ್ತಿಯೊಳಗೆ ವಿದ್ಯಾರ್ಥಿಗಳಿಗೆ ದಿನದ 24 ಗಂಟೆಯೂ ಅರ್ಹ ವೈದ್ಯಕೀಯ ಸೌಲಭ್ಯ ಲಭ್ಯ ಇರುವುದನ್ನು ಖಚಿತಪಡಿಸಬೇಕು
ಲಿಂಗ ತಾರತಮ್ಯ ನಿವಾರಣೆ ಮತ್ತು ಲೈಂಗಿಕ ಕಿರುಕುಳ ತಡೆ ಕಾಯ್ದೆಗಳಂತಹ ಯುಜಿಸಿ ನಿಯಮಗಳನ್ನು ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು
ಬೆಂಗಳೂರು: ರಾಜ್ಯದ ಯಾವುದೇ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ (ದೂರ ಶಿಕ್ಷಣ ಅಥವಾ ಆನ್‌ಲೈನ್ ಶಿಕ್ಷಣ ಸೇರಿ)ಯ ಅಸ್ವಾಭಾವಿಕ ಸಾವು ಅಥವಾ ಯಾವುದೇ ಸ್ಥಳದಲ್ಲಿ ಆತ್ಮಹತ್ಯೆ ಸಂಭವಿಸಿದರೆ ಸಂಸ್ಥೆಯು ತಕ್ಷಣವೇ ತನ್ನ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ವಿದ್ಯಾರ್ಥಿಗಳ ಸುರಕ್ಷತೆ, ಮಾನಸಿಕ ಆರೋಗ್ಯ ರಕ್ಷಣೆ ಮತ್ತು ಸಾಂಸ್ಥಿಕ ಉತ್ತರದಾಯಿತ್ವವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯು ಈ ಸೂಚನೆ ನೀಡಿದೆ.
ವಿದ್ಯಾರ್ಥಿಗಳ ಆತ್ಮಹತ್ಯೆ ಮತ್ತು ಅಸ್ವಾಭಾವಿಕ ಸಾವಿನ ಪ್ರಕರಣಗಳ ಕುರಿತು ಎಲ್ಲ ಸಂಸ್ಥೆಗಳು ಸಂಬಂಧಪಟ್ಟ ಆಡಳಿತ ಇಲಾಖೆಗಳು ಹಾಗೂ ಎಐಸಿಟಿಇ, ಎನ್‌ಎಂಸಿ ಮುಂತಾದ ನಿಯಂತ್ರಕ ಸಂಸ್ಥೆಗಳಿವೆ ವಾರ್ಷಿಕ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ವಸತಿ ಸಹಿತ ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್, ಹಾಸ್ಟೆಲ್, ಪಿಜಿ ಸೇರಿ ಒಂದು ಕಿ.ಮೀ ವ್ಯಾಪ್ತಿಯೊಳಗೆ ವಿದ್ಯಾರ್ಥಿಗಳಿಗೆ ದಿನದ 24 ಗಂಟೆಯೂ ಅರ್ಹ ವೈದ್ಯಕೀಯ ಸೌಲಭ್ಯ ಲಭ್ಯ ಇರುವುದನ್ನು ಖಚಿತಪಡಿಸಬೇಕು ಎಂದು ತಿಳಿಸಲಾಗಿದೆ.
ಹಣಕಾಸು ವಿಚಾರವಾಗಿ ವಿದ್ಯಾರ್ಥಿಯನ್ನು ಪರೀಕ್ಷೆ ಕೂರದಂತೆ ತಡೆಯವಂತಿಲ್ಲ. ಹಾಸ್ಟೆಲ್ ಸೌಲಭ್ಯ ನಿರಾಕರಿಸುವುದು, ಅಂಕಪಟ್ಟಿ ಹಾಗೂ ಪದವಿ ಪ್ರಮಾಣಪತ್ರಗಳನ್ನು ತಡೆಹಿಡಿಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ರ‌್ಯಾಗಿಂಗ್ ತಡೆಗಟ್ಟುವಿಕೆ, ಲಿಂಗ ತಾರತಮ್ಯ ನಿವಾರಣೆ ಮತ್ತು ಲೈಂಗಿಕ ಕಿರುಕುಳ ತಡೆ ಕಾಯ್ದೆಗಳಂತಹ ಯುಜಿಸಿ ನಿಯಮಗಳನ್ನು ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.