ಕೋಲಿ ಸಮಾಜ ಎಸ್ಟಿಗೆ ಸೇರಿಸಲು ಪ್ರಯತ್ನ

ಸೇಡಂ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ವೈದ್ಯಕಿಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್​ ಉದ್ಘಾಟಿಸಿದರು. ಶ್ರೀ ಶಿವಶಂಕರ ಶಿವಾಚಾರ್ಯ, ಶ್ರೀ ಪಂಚಾಕ್ಷರ ಸ್ವಾಮೀಜಿ, ಶ್ರೀ ಮಲ್ಲಣ್ಣಪ್ಪ ಸ್ವಾಮೀಜಿ, ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ, ಮಾಜಿ ಶಾಸಕ ರಾಜಕುಮಾರ ಪಾಟೀಲ್​ ತೆಲ್ಕೂರ, ಜೆಡಿಎಸ್​ ಜಿಲ್ಲಾಧ್ಯಕ್ಷ ಬಾಲರಾಜ್​ ಗುತ್ತೇದಾರ್​ ಇತರರಿದ್ದರು.
ಸೇಡಂ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ವೈದ್ಯಕಿಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್​ ಉದ್ಘಾಟಿಸಿದರು. ಶ್ರೀ ಶಿವಶಂಕರ ಶಿವಾಚಾರ್ಯ, ಶ್ರೀ ಪಂಚಾಕ್ಷರ ಸ್ವಾಮೀಜಿ, ಶ್ರೀ ಮಲ್ಲಣ್ಣಪ್ಪ ಸ್ವಾಮೀಜಿ, ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ, ಮಾಜಿ ಶಾಸಕ ರಾಜಕುಮಾರ ಪಾಟೀಲ್​ ತೆಲ್ಕೂರ, ಜೆಡಿಎಸ್​ ಜಿಲ್ಲಾಧ್ಯಕ್ಷ ಬಾಲರಾಜ್​ ಗುತ್ತೇದಾರ್​ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಡಾ.ಶರಣಪ್ರಕಾಶ ಪಾಟೀಲ್​ ಭರವಸೆ
  • ಸೇಡಂನಲ್ಲಿ ಅಂಬಿಗರ ಚೌಡಯ್ಯ ಜಯಂತಿ
ಸೇಡಂ: ವಚನ ಸಾಹಿತ್ಯವು ಕ್ರಾಂತಿಕಾರಿ ತತ್ವದಿಂದ ಕೂಡಿದ್ದು, ಅದರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗಲಿದೆ ಎಂದು ವೈದ್ಯಕಿಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್​ ಹೇಳಿದರು.
ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಸಮಿತಿಯಿಂದ ಆಯೋಜಿಸಿದ್ದ ಕೋಲಿ ರ್ಜನೆ ಹಾಗೂ ಬೃಹತ್​ ಸಮಾವೇಶ ಉದ್ಘಾಟಿಸಿ ಮಾತನಾಡಿ, ಅಂಬಿಗರ ಚೌಡಯ್ಯ ಅವರು ನುಡಿದಂತೆ ನಡೆದವರು, ಅವರು ನೇರ ಮತ್ತು ನಿಷ್ಠುರರಾಗಿದ್ದರು ಎನ್ನುವ ಕಾರಣಕ್ಕೆ ಅವರನ್ನು ನಿಜಶರಣ ಎಂದು ಕರೆಯಲಾಗುತಿತ್ತು. ತಾಲೂಕಿನ ಯಾನಾಗುಂದಿಯಲ್ಲಿ ಕೆಲ ವರ್ಷಗಳ ಹಿಂದೆ ಕೋಲಿ ಸಮಾವೇಶ ನಡೆಸಿ ಕೋಲಿ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡುವಂತೆ ಕೇಂದ್ರಕ್ಕೆ ವರದಿ ಸಲ್ಲಿಸಲಾಯಿತು. ವಿವಿಧ ಕಾರಣಗಳಿಂದ ಕಡತ ವಾಪಸ್ಸಾಗಿದೆ. ಕೆಲ ಪದಗಳನ್ನು ಸೇರಿಸಿ ಮತ್ತೆ ಕಳಿಸಲಾಗುತ್ತದೆ. ವಿಧಾನಸೌದ ಎದುರು ಚೌಡಯ್ಯ ಮೂರ್ತಿ ಪ್ರತಿಷ್ಠಾಪನೆ ಕುರಿತು ಸಿಎಂ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ವಿಧಾನ ಪರಿಷತ್​ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಕೋಲಿ ಸಮಾಜ ಎಸ್ಟಿ ಸೇರ್ಪಡೆ ಮಾಡಬೇಕೆಂಬ ಬೇಡಿಕೆ ಇದೆ. ಅಲ್ಲದೆ ಮಾತಾ ಮಾಣಿಕೇಶ್ವರಿ ಪ್ರಾಧಿಕಾರಕ್ಕೆ 500 ಕೋಟಿ ರೂ. ನೀಡಬೇಕು ಎಂದು ಒತ್ತಾಯಿಸಿದರು.
ವಿಧಾನ ಪರಿಷತ್​ ಸದಸ್ಯರಾದ ಎನ್​.ರವಿಕುಮಾರ, ಡಾ.ಸಾಬಣ್ಣ ತಳವಾರ, ಕೋಲಿ ಸಮಾಜದ ಜಿಲ್ಲಾಧ್ಯಕ್ಷ ರವಿರಾಜ ಕೊರವಿ ಮಾತನಾಡಿದರು. ಶ್ರೀ ಶಿವಶಂಕರ ಶಿವಾಚಾರ್ಯ, ಶ್ರೀ ಪಂಚಾಕ್ಷರ ಸ್ವಾಮೀಜಿ, ಶ್ರೀ ಮಲ್ಲಣ್ಣಪ್ಪ ಸ್ವಾಮೀಜಿ, ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.
ಮಾಜಿ ಶಾಸಕ ರಾಜಕುಮಾರ ಪಾಟೀಲ್​ ತೆಲ್ಕೂರ, ಜೆಡಿಎಸ್​ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ್​, ಮೀನುಗಾರಿಕೆ ನಿಗಮ ಮಂಡಳಿ ಅಧ್ಯೆ ಮಾಲಾ ಬಿ.ನಾರಾಯಣರಾವ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಮೇಶ ಅಳ್ಳೊಳ್ಳಿ, ಪ್ರಮುಖರಾದ ದತ್ತಾತ್ರೆಯರೆಡ್ಡಿ ಮುದಿರಾಜ್​, ಲಚ್ಚಪ್ಪ ಜಮಾದಾರ, ಶಿವಕುಮಾರ ನಾಟೀಕಾರ, ಶಿವಾಜಿ ಮೆಟೆಗಾರ, ಬಸವರಾಜ ಪಾಟೀಲ್​ ಊಡಗಿ, ರವಿ ನಂದಿಗಾಮ, ಜೈಪ್ರಕಾಶ ಕಮಕನೂರ, ಬಸವರಾಜ, ಕೇಶಪ್ಪ ಬಿರಾದಾರ ಇತರರಿದ್ದರು.
ಕೊತ್ತಲ ಬಸವೇಶ್ವರ ದೇವಾಲಯದಿಂದ ವೇದಿಕೆವರೆಗೂ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಯಿತು. ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಮೇಶ ಭೀಮರಾವ ಅಳ್ಳೊಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಅರವಿಂದ ಸಣ್ಣಿಂಗಿ ಸ್ವಾಗತಿಸಿದರು. ಶರಣಪ್ಪ ಎಳ್ಳಿ ಪ್ರಾರ್ಥಿಸಿದರು. ರೇವಣಸಿದ್ದಪ್ಪ ಜುಲ್ಪಿ ನಿರೂಪಣೆ ಮಾಡಿದರು.
"

ಕಲ್ಯಾಣ ಕರ್ನಾಟಕದ ಕೆಲ ಭಾಗದ ಜನರು ಗುಳೆ ಹೋಗುತ್ತಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತಹ ಆರ್ಥಿಕ, ಸಾಮಾಜಿಕ ಯೋಜನೆಗಳನ್ನು ಸರ್ಕಾರ ರೂಪಿಸಬೇಕು. ವಿದ್ಯಾರ್ಥಿ ವಸತಿ ನಿಲಯಗಳನ್ನು ಹೆಚ್ಚು ನಿರ್ಮಿಸಬೇಕು. ಸಮಾಜದವರು ಮೂರ್ತಿ ಪ್ರತಿಷ್ಠಾಪನೆಯಿಂದಲೇ ಸಮಾಜ ಪ್ರಗತಿ ಆಗುತ್ತದೆ ಎನ್ನುವ ಮನಸ್ಥಿತಿಯಿಂದ ಹೊರಬರಬೇಕಾಗಿದೆ.

> ಎನ್​.ರವಿಕುಮಾರ,

ವಿಧಾನ ಪರಿಷತ್​ ಸದಸ್ಯ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net