ಬೆಳಕವಾಡಿಯ ಕಾಳಿಕಾಂಭ ದೇವಸ್ಥಾನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಶೇಖರ್ ಬೆಳಕವಾಡಿ, ಮೂರ್ತಿ ವಕ್ಕರಹಳ್ಳಿ ಅವರನ್ನು ಅಭಿನಂದಿಸಲಾಯಿತು. ಪ್ರಕಾಶ್, ಕಾಂತರಾಜು, ರಾಚಪ್ಪಾಜಿ, ಪುಟ್ಟಸ್ವಾಮಾಚಾರ್, ಗೋವಿಂದಾಚಾರ್, ಮಂಟೇಸ್ವಾಮಿ ಪೂರಿಗಾಲಿ, ನಟರಾಜ್ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ವಿಶ್ವಕರ್ಮ ಮಹಾಸಭಾ
ಬಿ.ಜಿ.ಪುರ ಹೋಬಳಿ ಘಟಕ
ಮಳವಳ್ಳಿ: ತಾಲೂಕಿನ ವಿಶ್ವಕರ್ಮ ಮಹಾಸಭಾದ ಬಿ.ಜಿ.ಪುರ ಹೋಬಳಿ ಘಟಕಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ತಾಲೂಕಿನ ಬೆಳಕವಾಡಿ ಗ್ರಾಮದ ಕಾಳಿಕಾಂಬ ದೇವಸ್ಥಾನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅಧ್ಯಕ್ಷರಾಗಿ ಬೆಳಕವಾಡಿ ಶೇಖರ್ ಮತ್ತು ಉಪಾಧ್ಯಕ್ಷರಾಗಿ ಮೂರ್ತಿ ವಕ್ಕರಹಳ್ಳಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಅಧ್ಯಕ್ಷ ಬೆಳಕವಾಡಿ ಶೇಖರ್ ಮಾತನಾಡಿ, ವಿಶ್ವಕರ್ಮ ಸಮಾಜಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಆದರೆ ಇಂದು ನಮ್ಮ ಸಮಾಜ ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿದೆ. ಇದನ್ನು ಸರಿಪಡಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಿ.ಜಿ.ಪುರ ಹೋಬಳಿಯಲ್ಲಿರುವ ವಿಶ್ವಕರ್ಮ ಸಮಾಜದ ಪ್ರತಿ ಮನೆ ತೆರಳಿ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಘಕ್ಕೆ ಕರೆತರುವ ಮೂಲಕ ಸಂಘಟನೆಯನ್ನು ಬಲಪಡಿಸಲಾಗುವುದು. ಸಮಾಜದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ವಿದ್ಯಾರ್ಥಿ ವೇತನ ಮತ್ತು ಮಾರ್ಗದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಜತೆಗೆ ವಿಶ್ವಕರ್ಮ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಿಗುವ ಸಾಲ ಸೌಲಭ್ಯ ಹಾಗೂ ಸರ್ಕಾರದ ಯೋಜನೆಗಳನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪ್ರಭಾರ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಕಾಂತರಾಜು, ರಾಚಪ್ಪಾಜಿ, ಪುಟ್ಟಸ್ವಾಮಾಚಾರ್, ಗೋವಿಂದಾಚಾರ್, ಮಂಟೇಸ್ವಾಮಿ ಪೂರಿಗಾಲಿ ಇತರರಿದ್ದರು.