14ಕ್ಕೆ ಸ್ಪೀಕರ್, ಸಭಾಪತಿ ಸ್ಥಾನಕ್ಕೆ ಚುನಾವಣೆ

ವಿಧಾನಸೌಧ
ವಿಧಾನಸೌಧ
Published on
ಎರಡೂ ಸದನಗಳಲ್ಲಿ ಆಡಳಿತರೂಢ ಕಾಂಗ್ರೆಸ್‌ಗೆ ಬಹುಮತ ಇರುವ ಕಾರಣ ಸುಲಭವಾಗಿ ಸ್ಪೀಕರ್ ಮತ್ತು ಸಭಾಪತಿ ಸ್ಥಾನವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ. ಸ್ಪೀಕರ್ ಸ್ಥಾನಕ್ಕೆ ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲ್ ಅವರನ್ನು ಹಾಗೂ ಮೇಲ್ಮನೆ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಅವರಿಗೆ ಕಲ್ಪಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಸೂಚನೆ ನೀಡಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಉಪ ಸಭಾಧ್ಯಕ್ಷರಾಗಿ ನಿಯೋಜನೆ ಆಗಿದ್ದರೆ, ಹಿರಿಯ ನಟಿ ಉಮಾಶ್ರೀ ಹೆಸರನ್ನು ಉಪ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಅಂತಿಮ ಮಾಡಿದೆ. ಈ ಎರಡು ಸ್ಥಾನಕ್ಕೂ ಚುನಾವಣೆ ನಡೆಯಲಿದೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿದ್ದರೆ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಪ್ರತಿಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದರೆ ಚುನಾವಣೆ ನಡೆಯಲಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net