ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸಾವು

ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು
ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸಾವು
  • ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿಯಲ್ಲಿ ಘಟನೆ
  • ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿದ್ಯುತ್ ತಂತಿ ಸ್ಪರ್ಶ: ಬಾಲಕಿ ಸಾವು
ಚಿಕ್ಕೋಡಿ : ವಿದ್ಯುತ್ ತಂತಿ ಸ್ಪರ್ಶಿಸಿ ತಾಲೂಕಿನ ಇಂಗಳಿ ಗ್ರಾಮದ ಸಾನ್ವಿ ಕಾಂಬಳೆ(೯) ಬಾಲಕಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಮೃತ ಬಾಲಕಿಯು ಸ್ಕಿಪಿಂಗ್ ಆಡವಾಟವಾಡಲು ಬಳಸುತ್ತಿದ್ದ ಹಗ್ಗವು ಮನೆಯ ಮೇಲೆ ಅಳವಡಿಸಿದ್ದ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದು, ಅದನ್ನು ಆಸ್ಪತ್ರೆಗೆ ಹೋದಾಗ ವಿದ್ಯುತ್ ಸ್ಪರ್ಶದಿಂದ ಬಾಲಕಿ ಮನೆಯ ಕೆಳಗೆ ಬಿದ್ದು ಗಂಭೀರವಾದ ಬಾಲಕಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವಿಗಿಡಾಗಿದ್ದಾಳೆ.
ಮೂರನೇ ತರಗತಿ ಓದುತ್ತಿದ್ದ ಬಾಲಕಿಯ ಸಾವಿನಿಂದ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತ್ತು.
ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net