ರಾಜಾ ಲಖಮಗೌಡ ವಿಾನ ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸಮಾರೋಪ ಸಮಾರಂಭದಲ್ಲಿ ಮೊಹಮ್ಮದ್ ರೋಷನ್, ಕಿರಣ ಕಮತೆ, ಡಾ.ಜೆ.ಎಸ್ ಕವಳೇಕರ್, ಲಿಂಗೌಡ ದೇಸಾಯಿ, ವಿಜಯಕುಮಾರ ಪಾಟೀಲ ಇದ್ದರು.
Published on:
Copied
Follow Us
ಬೆಳಗಾವಿ: ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಪ್ರಾಮಾಣಿಕತೆ, ನಿರಂತರ ಅಧ್ಯಯನ ಹಾಗೂ ಸೇವಾ ಮನೋಭಾವ ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸಲಹೆ ನೀಡಿದರು.
ನಗರದ ಕೆಎಲ್ಇ ಸಂಸ್ಥೆಯ ರಾಜಾ ಲಖಮಗೌಡ ವಿಾನ ಮಹಾವಿದ್ಯಾಲಯದಲ್ಲಿ ಈಚೆಗೆ ಜರುಗಿದ ಜಿಮ್ಖಾನ್ ಮತ್ತು ಸಾಂಸತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಶಾಲಾ&ಕಾಲೇಜು ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಬೇಕು. ಶಿಸ್ತು ರೂಢಿಸಿಕೊಂಡು ಗುರಿ ಸಾಧನೆಗೆ ಮುಂದಾಗಬೇಕು ಎಂದರು.
ಐಎಎಸ್ ಅಧಿಕಾರಿ ಕಿರಣ ಕಮತೆ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ಮನೋಬಲ ಹೆಚ್ಚಿಸುತ್ತದೆ. ಸಾಂಸತಿಕ ಸಮಾರಂಭದಲ್ಲಿ ಭಾಗಿಯಾಗುವ ಮೂಲಕ ಪ್ರತಿಭೆ ಪ್ರದರ್ಶಿಸಬೇಕು ಎಂದರು.
ಶೈಣಿಕ, ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಪ್ರಾಂಶುಪಾಲೆ ಡಾ.ಜೆ.ಎಸ್ ಕವಳೇಕರ್ ಮಾತನಾಡಿದರು. ಆಡಳಿತ ಮಂಡಳಿ ಸದಸ್ಯ ಲಿಂಗೌಡ ದೇಸಾಯಿ, ವಿಜಯಕುಮಾರ ಪಾಟೀಲ, ವಿ.ಕೆ.ಗಾಣಿಗೇರ, ಪೂಜಾ ಮೆಳವಂಕಿ ಇತರರಿದ್ದರು.