ಜೀವನದ ಮೌಲ್ಯ ಅಳವಡಿಸಿಕೊಳ್ಳಿ: ವಿಶ್ರಾಂತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಸಲಹೆ-Retired Justice P.N. Desai advises
ವಿಶ್ರಾಂತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ
Published on:
Copied
Follow Us
ಬೆಂಗಳೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶೈಕ್ಷಣಿಕ ಸಾಧನೆಯ ಜತೆಗೆ ಜೀವನದ ಮೌಲ್ಯ ಅಳವಡಿಸಿಕೊಳ್ಳವಂತಾಗಬೇಕು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಹಾಗೂ ವಿಶ್ರಾಂತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಹೇಳಿದ್ದಾರೆ.
ನಗರದಲ್ಲಿ ಸೌಂದರ್ಯ ಕಾನೂನು ಮಹಾವಿದ್ಯಾಲಯ ಶನಿವಾರ ಆಯೋಜಿಸಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಾಮಾಣಿಕತೆ ಮತ್ತು ಸಾಮಾಜಿಕ ಜವಾಬ್ದಾರಿ ಅತ್ಯಂತ ಮುಖ್ಯವಾಗಿದೆ. ಉತ್ತಮ ನಾಗರಿಕರಾಗಿ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಇದೇವೇಳೆ ಮಾನವ ಹಕ್ಕುಗಳ ಆಯೋಗದ ಕಾರ್ಯವೈಖರಿ ಮತ್ತು ಉದ್ದೇಶಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಹಬನೇರೋ ಫುಡ್ಸ್ ಇಂಟರ್ನ್ಯಾಷನಲ್ ಸಂಸ್ಥೆ ಸಂಸ್ಥಾಪಕ ಗ್ರಿಫಿತ್ ಡೇವಿಡ್ ಮಾತನಾಡಿ, ಪದವಿ ಗಳಿಸುವುದು ಅಂತಿಮ ಗುರಿಯಲ್ಲ. ಅದು ಜೀವನದ ಹೊಸ ಪಯಣದ ಆರಂಭ ಇದ್ದಂತೆ. ಯಶಸ್ಸು ಸಾಧಿಸಲು ಶಿಸ್ತು, ಪರಿಶ್ರಮ ಮತ್ತು ನಿರಂತರ ಪ್ರಯತ್ನ ಅಗತ್ಯವಾಗಿದೆ ಎಂದರು.
ಕಲೆ, ವಿಜ್ಞಾನ, ವಾಣಿಜ್ಯ, ನಿರ್ವಹಣಾ ಮತ್ತು ಕಾನೂನು ವಿಭಾಗಗಳ 356 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಸೌಂದರ್ಯ ಎಜುಕೇಷನಲ್ ಟ್ರಸ್ಟ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ. ಕೀರ್ತನ್ ಕುಮಾರ್, ಸೌಂದರ್ಯ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಸೌಂದರ್ಯ ಪಿ. ಮಂಜಪ್ಪ ಇತರರಿದ್ದರು.