ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಜೆಟ್‌ನ ಪೂರ್ವಭಾವಿ ಸಭೆಯಲ್ಲಿ 2026-27ನೇ ಸಾಲಿನ ಅಂದಾಜು ಆಯವ್ಯಯ ಮಂಡಿಸಿ ಮಾತನಾಡಿ, ನಗರದ ಐತಿಹಾಸಿಕ ಜಾಜಮ್ಮನ ಕಟ್ಟೆಯನ್ನು ಅಭಿವೃದ್ಧಿ ಮಾಡಲಾಗುವುದು. ನಗರಕ್ಕೆ ನೀರುಣಿಸುವ ದೊಡ್ಡ ಕೆರೆ ಅಭಿವೃದ್ಧಿ, ನಗರದ ಮುಖ್ಯ ರಸ್ತೆಗಳಲ್ಲಿ ಹೊಸ ವಿದ್ಯುತ್ ದೀಪಗಳ ಅಳವಡಿಕೆ, ನಾಗರಿಕರ ಆರೋಗ್ಯದ ದೃಷ್ಟಿಯಿಂದ ಯೋಗ ಮಂದಿರ ನಿರ್ವಾಣ, ನಗರದ ಉದ್ಯಾನವನಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಜತೆಗೆ ಚಾಲನೆ ಪರವಾನಗಿ ಪಡೆಯದ ನಾಗರಿಕರಿಗೆ ಚಾಲನಾ ಪರವಾನಗಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.