ಆರ್ಥಿಕ ಸದೃಢತೆಯಿಂದ ಸಬಲೀಕರಣ

Empowerment through financial strength
Empowerment through financial strength
Published on
ಹುಳಿಯಾರು: ಇಂದಿನ ಸಮಾಜದಲ್ಲಿ ಮಹಿಳೆಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢರಾದಾಗ ಮಾತ್ರ ನಿಜವಾದ ಮಹಿಳಾ ಸಬಲೀಕರಣ ಸಾಧ್ಯ ಎಂದು ಸುವರ್ಣಮುಖಿ ಸಂಸ್ಥೆಯ ಅಧ್ಯಕ್ಷ ರಾಮಕೃಷ್ಣಪ್ಪ ತಿಳಿಸಿದರು.
ಹುಳಿಯಾರಿನ ವಿಜಯನಗರ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ನಿರಾಶ್ರಿತರ ಮಹಿಳೆಯದ ಕ್ಷೇಮಾಭಿವೃದ್ಧಿ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.
ಪಟ್ಟಣ ಪಂಚಾಯಿತಿಯ ಕಂದಾಯ ನಿರೀಕ್ಷಕಿ ಶ್ರುತಿ ಮಾತನಾಡಿ, ಮಹಿಳೆಯರು ತಮ್ಮಲ್ಲಿರುವ ಕೀಳರಿಮೆಯನ್ನು ತೊರೆದು ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಸಾಧನೆ ಮಾಡುವ ಶಕ್ತಿ ಹೊಂದಿದ್ದಾರೆ ಎಂದು ಎಂದರು.
ಸೃಜನಾ ಮಹಿಳಾ ಸಂಘದ ಆಧ್ಯೆ ಎನ್​.ಇಂದಿರಮ್ಮ ಮಾತನಾಡಿದರು. ಮಹಿಳೆಯರ ಹಕ್ಕುಗಳು ಮತ್ತು ಕೊಡು ಅಥವಾ ಪಡಿ ಎಂಬ ಪರಿಕಲ್ಪನೆಯ ಕುರಿತು ಸುದೀರ್ಘವಾಗಿ ಮಾತನಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net