ಭಾಲ್ಕಿ: ಮಹಿಳೆಯರ ಆರ್ಥಿಕ ಸುಧಾರಣೆಯು ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಪಂಚಾಯಿತಿಯ ವಿವಿಧ ಯೋಜನೆಗಳ ಮೂಲಕ ಪ್ರೋತ್ಸಾಹಿಸಲಿದೆ ಎಂದು ಅಭಿವೃದ್ಧಿ ಅಧಿಕಾರಿ ಗೀತಾ ಪಾಟೀಲ್ ಹೇಳಿದರು.
ತಾಲೂಕಿನ ಅಂಬೆಸಾಂಗವಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳಾ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸಾಕಷ್ಟು ಯೋಜನೆಗಳಿವೆ. ತರಬೇತಿ, ಆರ್ಥಿಕ ನೆರವು ಹಾಗೂ ಇನ್ನಿತರ ಸೌಲಭ್ಯಗಳು ದೊರೆಯಲಿವೆ. ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಂಡುಕೊಳ್ಳಬಹುದಾಗಿದೆ ಎಂದರು.
ಮಹಿಳಾ ಗ್ರಾಮ ಸಭೆಯ ಮೂಲಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ. ಹಾಗೆಯೇ ಅವರಿಗೆ ಕಲ್ಪಿಸಿಕೊಡಬಹುದಾದ ಸೌಲಭ್ಯಗಳ ಬಗ್ಗೆ ತಿಳಿಸಿ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ವಿವಿಧ ಸಂ ಸಂಸ್ಥೆಯ ಪ್ರಮುಖರು, ಮಹಿಳೆಯರು ಭಾಗವಹಿಸಿದ್ದರು.