ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಳ್ಳಿ

ಕಲಬುರಗಿ ಕೆಕೆಸಿಸಿಐ ಸಭಾಂಗಣದಲ್ಲಿ ಸರ್ಕಾರಿ, ಅರೆ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶರಣಬಸಪ್ಪಗೌಡ ದರ್ಶನಾಪುರ, ಅಲ್ಲಮಪ್ರಭು ಪಾಟೀಲ್​, ಬಿ.ಎಸ್​.ದೇಸಾಯಿ, ಡಾ.ಶರಣಪ್ಪ ಎಸ್​.ಡಿ, ಡಾ.ನಾ.ಸೋಮೇಶ್ವರ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಅಲ್ಲಮಪ್ರಭು ಪಾಟೀಲ್​ ಸಲಹೆ
  • ಸರ್ಕಾರಿ, ಅರೆ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಕಾರ್ಯಕ್ರಮ
ಕಲಬುರಗಿ: ಸಹಕಾರ ಸಂಘಗಳು ಸದಸ್ಯರ ಹಿತಾಸಕ್ತಿ ಕಾಪಾಡುವುದರ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಅಲ್ಲಮಪ್ರಭು ಪಾಟೀಲ್​ ಸಲಹೆ ನೀಡಿದರು.
ಚೇಂಬರ್​ ಆಫ್​ ಕಾಮರ್ಸ್​ ಸಭಾಂಗಣದಲ್ಲಿ ಸರ್ಕಾರಿ, ಅರೆ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ವಾರ್ಷಿಕ ಸಭೆ, ಆಡಳಿತ ಕಚೇರಿ ಕಟ್ಟಡದ ಶಂಕುಸ್ಥಾಪನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ಆರ್ಥಿಕತೆಗೆ ಸಹಕಾರ ಸಂಘಗಳ ಕೊಡುಗೆ ಅಪಾರವಾಗಿದೆ ಎಂದರು.
ನಗರ ಪೊಲೀಸ್​ ಆಯುಕ್ತ ಡಾ.ಶರಣಪ್ಪ ಎಸ್​.ಡಿ. ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.
ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಆಡಳಿತ ಕಚೇರಿ ಕಟ್ಟಡದ ಶಂಕುಸ್ಥಾಪನೆ ಫಲಕ ಅನಾವರಣಗೊಳಿಸಿದರು.
ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ.ಬಿ.ಎಸ್​.ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಡಾ.ನಾ.ಸೋಮೇಶ್ವರ, ಸಹಕಾರ ಸಂಘಗಳ ಉಪ ನಿಬಂಧಕ ಕಿಶೋರಕುಮಾರ ಪಾಟೀಲ್​ ಇತರರಿದ್ದರು.
ವಿವಿಧ ಕ್ಷೇತ್ರದ ಸಾಧಕರಾದ ಎ.ಕೆ.ರಾಮೇಶ್ವರ (ಸಾಹಿತ್ಯ), ಡಾ.ಎಚ್​.ವೀರಭದ್ರಪ್ಪ (ವೈದ್ಯಕಿಯ), ಶರಣಬಸಪ್ಪ ಪಪ್ಪಾ (ಸಮಾಜ), ಮನೋಜಕುಮಾರ ಗುದ್ದಿ (ಪತ್ರಿಕಾ), ಗಾಯತ್ರಿ ಶಿಲ್ಪಿ (ಶಿಲ್ಪಕಲಾ) ಅವರಿಗೆ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net