ಅರ್ಹರು ಮತದಾನದಿಂದ ವಂಚಿತರಾಗದಿರಲಿ

ಗೋಕಾಕ ನಗರದ ನಗರಸಭೆ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಎಸ್‌ಐಆರ್ ವಿಶೇಷ ಸಭೆಯನ್ನು ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.
ಗೋಕಾಕ ನಗರದ ನಗರಸಭೆ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಎಸ್‌ಐಆರ್ ವಿಶೇಷ ಸಭೆಯನ್ನು ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.
Published on
ವಿಜಯವಾಣಿ ಸುದ್ದಿಜಾಲ ಗೋಕಾಕ
ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಲ್ಲರೂ ಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು. ಬಿಎಲ್‌ಒ-2 ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಪ್ರತಿಯೊಬ್ಬ ಮತದಾರರ ಮಾಹಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ನಗರಸಭೆ ಸಮುದಾಯ ಭವನದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿಂದ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಕರೆಯಲಾಗಿದ್ದ ಎಸ್‌ಐಆರ್ ವಿಶೇಷ ಸಭೆಯಲ್ಲಿ ಮಾತನಾಡಿ, ಬೂತ್ ಮಟ್ಟದಲ್ಲಿ ನೇಮಕಗೊಂಡಿರುವ ಬಿಎಲ್‌ಎ-2 ಕಾರ್ಯಕರ್ತರು ಒಂದೇ ಹೆಸರಿನ ಹಲವು ವ್ಯಕ್ತಿಗಳು ಒಂದೇ ಗ್ರಾಮ ಅಥವಾ ಪ್ರದೇಶದಲ್ಲಿ ವಾಸಿಸುವ ಸಂದರ್ಭಗಳಲ್ಲಿ ಹೆಸರು, ತಂದೆಯ ಹೆಸರು, ವಿಳಾಸ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಸರಿಯಾಗಿ ದಾಖಲಿಸಬೇಕು. ಪಕ್ಷ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು ಎಂದರು.
ವಿಭಾಗ ಪ್ರಭಾರ ಸಂಜಯ ಪಾಟೀಲ, ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಶಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಬಿಎಲ್‌ಒ-1 ಮಾಣಿಕ ಹಿರಟ್ಟಿ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ರಾಜಶ್ರೀ ಒಡೆಯರ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಬಿಜೆಪಿ ಮುಖಂಡ ಪ್ರಮೋದ ಜೋಶಿ, ಡಾ.ಕೆ.ವಿ.ಪಾಟೀಲ, ಸುರೇಶ ಪಾಟೀಲ, ಸುರೇಶ ಪತ್ತಾರ ಸೇರಿದಂತೆ ಹಲವಾರು ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net