ಸೇತುವೆ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ Suresh Babu

ಹುಳಿಯಾರು Suresh Babu ಹೋಬಳಿಯ ನಂದಿಹಳ್ಳಿಯಲ್ಲಿ ಸೇತುವೆ ನಿಮಾರ್ಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್​ಬಾಬು ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ತಿಮ್ಮಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮೇಶ್​ ಇದ್ದರು.

Published on

ಹುಳಿಯಾರು:

ಹೋಬಳಿಯ ನಂದಿಹಳ್ಳಿ ಗ್ರಾಮಸ್ಥರ ಬಹುದಿನಗಳ ಕನಸಾಗಿದ್ದ ನೂತನ ಸೇತುವೆ ನಿಮಾರ್ಣ

Suresh Babu

ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್​ ಬಾಬು ಬುಧವಾರ ಭೂಮಿ ಪೂಜೆ ನೆರವೇರಿಸಿದರು.

ಮಾತನಾಡಿದ ಶಾಸಕರು, ಗ್ರಾಮೀಣ ಭಾಗದ ಜನರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ನಂದಿಹಳ್ಳಿಯಲ್ಲಿ ಸೇತುವೆ ನಿಮಾರ್ಣದಿಂದ ಈ ಗ್ರಾಮ ಸೇರಿ ಸುತ್ತಮುತ್ತಲಿನ ಹಲವು ಗ್ರಾಮಗಳ ಜನರಿಗೆ ಹಾಗೂ ರೈತರಿಗೆ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಸೌಕರ್ಯ ಒದಗಿಸುವ ಸಂಕಲ್ಪ ನಮ್ಮದಾಗಿದೆ. ಜನರ ಬಹುದಿನಗಳ ಬೇಡಿಕೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ಕಾಮಗಾರಿಯು ಗುಣಮಟ್ಟದಿಂದ ಕೂಡಿರಬೇಕು ಹಾಗೂ ನಿಗದಿತ ಸಮಯದೊಳಗೆ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.
ಗುತ್ತಿಗೆದಾರ ರೇಣುಕಯ್ಯ, ಜಿಪಂ ಮಾಜಿ ಸದಸ್ಯೆ ಮಂಜಮ್ಮ, ಗ್ರಾಪಂ ಮಾಜಿ ಅಧ್ಯಕ್ಷ ದೇವರಾಜು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net