ವಲಯ ಅರಣ್ಯಾಧಿಕಾರಿ ಸುರೇಶ್ ಮಾತನಾಡಿ, ತಿಮ್ಮಲಾಪುರ ಅರಣ್ಯ ಪ್ರದೇಶವನ್ನು 2016ರಲ್ಲಿ ಅಭಯಾರಣ್ಯ ಮಾಡಲು ಶಾಸಕ ರಾಜಣ್ಣ ಅವರ ಶ್ರಮ ಹೆಚ್ಚಾಗಿದ್ದು, ಇದರಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಕಳೆದ ವರ್ಷ 65 ಸಾವಿರ ಗಿಡಗಳನ್ನು ನೆಡಲಾಗಿದ್ದು, ಶೇ.90ಕ್ಕೂ ಹೆಚ್ಚು ಗಿಡಗಳು ಬೆಳೆದು ನಿಂತಿವೆ. ಈ ವರ್ಷ 1.70 ಲಕ್ಷ ಗಿಡ ನೆಡಲಾಗಿದೆ ಎಂದು ಮಾಹಿತಿ ನೀಡಿದರು. ಕೆಪಿಸಿಸಿ ಸದಸ್ಯ ಎಂ.ಎಸ್.ಮಲ್ಲಿಕಾರ್ಜುನಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ, ಡಿಡಿಪಿಐ ಮಾಧವರೆಡ್ಡಿ, ಬಿಇಒ ಹನುಮಂತರಾಯಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಂಗಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆಂಚಪ್ಪ, ಕೆಎಂಎಫ್ ಮಾಜಿ ನಿರ್ದೇಶಕ ಕಾಂತರಾಜು, ಸಾಹಿತಿ ನೇ.ಬ. ರಾಮಲಿಂಗ ಶೆಟ್ಟಿ, ಶಾಲೆಯ ಮುಖ್ಯಶಿಕ್ಷಕ ಮಲ್ಲಿಕಾರ್ಜುನಯ್ಯ ಮತ್ತಿತರರು ಇದ್ದರು.