ಔರಾದ್: ಪರಿಸರ ಸಂರಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದರ ಪೋಷಣೆ ಮಾಡಬೇಕು ಎಂದು ತಹಸೀಲ್ದಾರ್ ಮಹೇಶ ಪಾಟೀಲ್ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ಕಾಳಜಿ ಒಂದು ದಿನಕ್ಕೆ ಸೀಮಿತವಾಗದಿರಲಿ. ಗ್ರಾಮೀಣ ಪ್ರದೇಶದಲ್ಲಿ ಅರಣ್ಯ ಇಲಾಖೆ ಜಾಗೃತಿ ಜಾಥ ನಡೆಸುವ ಮೂಲಕ ಪರಿಸರ ಉಳಿಸಿ, ಬೆಳೆಸಲು ಶ್ರಮಿಸಬೇಕು ಎಂದರು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯ ಚನ್ನಪ್ಪ ಉಪ್ಪೆ ಮಾತನಾಡಿ, ಹೆಚ್ಚುತ್ತಿರುವ ಮಾಲಿನ್ಯ ಮತ್ತು ಅರಣ್ಯ ನಾಶದಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಹಸಿರು ವಾತಾವರಣ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಕಿರಣ ಪಾಟೀಲ್ ಮಾತನಾಡಿ, ಪರಿಸರ ಸಂರಣೆ ಇಂದಿನ ಅಗತ್ಯವಾಗಿದ್ದು, ಪ್ರಕೃತಿಯನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.
ತಾಪಂ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳ ಉಪಾಧ್ಯ ಬಾಳಾಸಾಹೇಬ್ ಪಾಟೀಲ್, ಸದಸ್ಯರಾದ ಶಿವಕುಮಾರ ಪಾಟೀಲ್, ಶಂಕರ ಪಾಟೀಲ್, ಡಿಕೆ ಚಂದು, ಚೆನ್ನಬಸಪ್ಪ ಕೌಠಾ, ಕೃಷ್ಣಾ ಕಾಂಬಳೆ, ಸಲ್ಲಾವುದ್ದಿನ್ ಜಂಬಗಿ ಇತರರಿದ್ದರು.