ಚಿತ್ತಾಪುರ ಕೋರ್ಟ್ ಆವರಣದಲ್ಲಿ ಶುಕ್ರವಾರ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸಿರಾಜುದ್ದೀನ್ ಎ. ಸಸಿ ನೆಟ್ಟರು. ವಿಜಯಕುಮಾರ ಬಡಿಗೇರ, ಸೋಮಶೇಖರ ಕರದಾಳ ಇದ್ದರು.
ಚಿತ್ತಾಪುರ: ಪರಿಸರ ರಸುವ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ ಎಂದು 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸಿರಾಜುದ್ದೀನ್ ಎ. ಹೇಳಿದರು.
ವಿಶ್ವ ಪರಿಸರ ದಿನ ನಿಮಿತ್ತ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂ ಹಾಗೂ ಪ್ರಾದೇಶಿಕ ಅರಣ್ಯ ವಲಯ ಸಹಯೋಗದಡಿ ಶುಕ್ರವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿದ ಅವರು, ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ವಲಯ ಅರಣ್ಯಾಧಿಕಾರಿ ವಿಜಯಕುಮಾರ ಬಡಿಗೇರ ಮಾತನಾಡಿ, ಪರಿಸರ ಸಂರಸುವುದು ನಮ್ಮೆಲ್ಲರ ಹೊಣೆ. ಮರಗಳು ಭೂಮಿಯ ಶ್ವಾಸಕೋಶಗಳಿದ್ದಂತೆ. ಹೆಚ್ಚೆಚ್ಚು ಮರಗಳನ್ನು ಬೆಳೆಸುವುದರಿಂದ ಶುದ್ಧ ಗಾಳಿ, ಉತ್ತಮ ಹವಾಮಾನ ಹಾಗೂ ಜೀವ ವೈವಿಧ್ಯದ ಸಂರಣೆ ಸಾಧ್ಯವಾಗಲಿದೆ ಎಂದು ಹೇಳಿದರು.
ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ದೊಡ್ಡ ಸವಾಲಾಗಿದೆ. ವಿಶೇಷವಾಗಿ ಏಕಬಳಕೆ (ಸಿಂಗಲ್ ಯೂಸ್) ಪ್ಲಾಸ್ಟಿಕ್ ಭೂಮಿ, ನೀರು ಮತ್ತು ವನ್ಯಜಿವಿಗಳಿಗೆ ತೀವ್ರ ಹಾನಿಯುಂಟು ಮಾಡುತ್ತದೆ. ಆದ್ದರಿಂದ ನಾವು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರಿಸರಸ್ನೇಹಿ ಪರ್ಯಾಯ ವಸ್ತುಗಳನ್ನು ಬಳಸಬೇಕು ಎಂದು ಸಲಹೆ ನೀಡಿದರು.
ನ್ಯಾಯಾಧೀಶರಾದ ಕಿಶನ್ ಮಾಡಲಗಿ, ಅಭಿಷೇಕ ಜೋಶಿ, ನ್ಯಾಯವಾದಿಗಳ ಸಂದ ಅಧ್ಯ ಸೋಮಶೇಖರ ಕರದಾಳ, ಸಹಾಯಕ ಸರ್ಕಾರಿ ಅಭಿಯೋಜಕಿ ಅಂಜನಾದೇವಿ ಆರ್., ಅಪರ ಜಿಲ್ಲಾ ಸರ್ಕಾರಿ ನ್ಯಾಯವಾದಿ ವಿ.ಆರ್. ಕಾಂತಾ, ಸಿಪಿಐ ಎಸ್.ಸಿ. ಪಾಟೀಲ್ ಇತರರಿದ್ದರು.