ಶಾಲೆಯಲ್ಲಿ ಇಕೋ ಕ್ಲಬ್ ಸ್ಥಾಪಿಸಿ, ತಾಯಿ ಹೆಸರಲ್ಲಿ ಒಂದು ಗಿಡ ನೆಡಲು ಸೂಚನೆ

ಶಾಲೆಗಳಲ್ಲಿ ಇಕೋ ಕ್ಲಬ್ ಸ್ಥಾಪಿಸಲು ಸೂಚನೆ
ಶಾಲೆಗಳಲ್ಲಿ ಇಕೋ ಕ್ಲಬ್ ಸ್ಥಾಪಿಸಲು ಸೂಚನೆ
Published on

ಪ್ರಮುಖ ಮುಖ್ಯಾಂಶಗಳು

  • ಶಾಲಾವರಣದಲ್ಲಿ ಹಸಿರು ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಸೂಚನೆ
  • ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದು, ಹವಾಮಾನ ಬದಲಾವಣೆಯ ಕುರಿತು ಜವಾಬ್ದಾರಿ ಬೆಳೆಸುವುದು
  • ಪ್ರತಿಯೊಬ್ಬ ವಿದ್ಯಾರ್ಥಿಯಿಂದ ಕನಿಷ್ಠ ಒಂದು ಸಸಿ ನೆಡುವಿಕೆಗೆ ಉತ್ತೇಜನ ನೀಡುವುದು ಹಾಗೂ ಶಾಲಾ ಆವರಣ, ಕೃಷಿ ಭೂಮಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲು ಪ್ರೋತ್ಸಾಹ ನೀಡಬೇಕು
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣ ನಿರ್ಮಿಸುವ ಉದ್ದೇಶದಿಂದ ಇಕೋ ಕ್ಲಬ್ ಸ್ಥಾಪಿಸಬೇಕು ಮತ್ತು ತಾಯಿಯ ಹೆಸರಿನಲ್ಲಿ ಒಂದು ಮರ ಅಭಿಯಾನವನ್ನುನಡೆಸಬೇಕು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಸೂಚನೆ ನೀಡಿದೆ.
ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದು, ಹವಾಮಾನ ಬದಲಾವಣೆಯ ಕುರಿತು ಜವಾಬ್ದಾರಿ ಬೆಳೆಸುವುದು ಮತ್ತು ಶಾಲಾವರಣದಲ್ಲಿ ಹಸಿರು ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.
ಪ್ರತಿಯೊಬ್ಬ ವಿದ್ಯಾರ್ಥಿಯಿಂದ ಕನಿಷ್ಠ ಒಂದು ಸಸಿ ನೆಡುವಿಕೆಗೆ ಉತ್ತೇಜನ ನೀಡುವುದು ಹಾಗೂ ಶಾಲಾ ಆವರಣ, ಕೃಷಿ ಭೂಮಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲು ಪ್ರೋತ್ಸಾಹ ನೀಡಬೇಕು ಎಂದು ಸೂಚಿಸಲಾಗಿದೆ.

ಡಿಜಿಟಲ್ ಅಪ್‌ಲೋಡ್ ಕಡ್ಡಾಯ

ಎಲ್ಲಾ ಶಾಲೆಗಳು ತಾವು ಆಯೋಜಿಸಿದ ಸಸಿ ನೆಡುವಿಕೆ ಮತ್ತು ಇಕೋ ಕ್ಲಬ್ ಚಟುವಟಿಕೆಗಳ ವಿವರ ಹಾಗೂ ಜಿಯೋಟ್ಯಾಗ್ ಫೋಟೋಗಳನ್ನು ನಿರ್ದಿಷ್ಟ ಪೋರ್ಟಲ್‌ನಲ್ಲಿ https://ecoclubs.education.gov.in ಶೇ. 100 ರಷ್ಟು ಅಪ್‌ಲೋಡ್ ಮಾಡುವುದು ಕಡ್ಡಾಯ ಎಂದು ಸಮಗ್ರ ಶಿಕ್ಷಣ ಕರ್ನಾಟಕ ಹೇಳಿದೆ.
ಜು.31ರೊಳಗೆ ಸಸಿ ನೆಡುವ ಗುರಿಯನ್ನು ಪೂರ್ಣಗೊಳಿಸಿ ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು. ಗುರಿ ಸಾಧನೆಯಲ್ಲಿ ವಿಳಂಬವಾದರೆ ಅಥವಾ ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಕ್ಷೇತ್ರ ಸಮನ್ವಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳ ಮೂಲಕ ವಿಶೇಷ ಕಾರ್ಯಯೋಜನೆ ರೂಪಿಸಿ ಪ್ರಗತಿ ಸಾಧಿಸಬೇಕು ಎಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net