ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಿಯಮಗಳಂತೆ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗೆ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಯಾವುದೇ ರೀತಿಯ ಪಠ್ಯ ವಿಷಯಗಳು, ಕಾಗದದ ಚೂರುಗಳು, ಜ್ಯಾಮಿತಿಯ ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ರೈಟಿಂಗ್ ಪ್ಯಾಡ್, ಪೆನ್ ಡ್ರೆÊವ್‌ಗಳು, ಎರೇಸರ್, ಲಾಗ್ ಟೇಬಲ್, ಎಲೆಕ್ಟಾçನಿಕ್ ಪೆನ್ ಸ್ಕ್ಯಾನರ್, ಮೊಬೈಲ್ ಫೋನ್, ಬ್ಲೂಟೂತ್, ಇಯರ್‌ಫೋನ್‌ಗಳು, ಮೈಕ್ರೋಪೋನ್, ಪೇಜರ್, ಹೆಲ್ತ್ ಬ್ಯಾಂಡ್ ಒಟ್ಟಾರೆ ಎಲ್ಲಾ ರೀತಿಯ ಇಲೆಕ್ಟಾçನಿಕ್ ವಸ್ತುಗಳು ವಾಲೆಟ್, ಗಾಗಲ್ಸ್, ಹ್ಯಾಂಡ್ ಬ್ಯಾಗ್‌ಗಳು, ಬೆಲ್ಟ್, ಕ್ಯಾಪ್ ಯಾವುದೇ ರೀತಿಯ ವಾಚ್, ಸ್ಮಾರ್ಟ್ ವಾಚ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಂವಹನ ಸಾಧನಗಳನ್ನು ಪರೀಕ್ಷಾ ಕೇಂದ್ರದ ಒಳಗೆ ತೆಗೆದುಕೊಂಡು ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.