ವಿಮಾನ ಹಾರಾಟ ತರಬೇತಿ ಅಕಾಡೆಮಿ ಕಾರ್ಯಾರಂಭ ಮಾಡಿದರೆ ವಿಮಾನ ನಿಲ್ದಾಣದ ರನ್‌ವೇ, ಟ್ಯಾಕ್ಸಿ ವೇ, ಏಪ್ರಾನ್ ಇವುಗಳನ್ನು ಕಂಪನಿ ಬಳಸಿಕೊಳ್ಳಲು ಅವಕಾಶ ಇರುತ್ತದೆ. ಅದು ಕೇಳಿರುವ ಸ್ಥಳಾವಕಾಶದಲ್ಲಿ ಹ್ಯಾಂಗರ್ಸ್, ತರಬೇತಿ ಮೂಲಸೌಕರ್ಯ, ವಿಮಾನ ನಿರ್ವಹಣೆಗೆ ಬೇಕಾದ ಸೌಲಭ್ಯಗಳು ಬರಲಿವೆ. ಇದರಿಂದ ಪ್ರಾದೇಶಿಕವಾಗಿ ಉತ್ತರ ಕರ್ನಾಟಕದಲ್ಲಿ ವೈಮಾನಿಕ ಸಂಪರ್ಕ ವ್ಯವಸ್ಥೆ ಸುಧಾರಿಸಲಿದೆ ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನೂರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.