ಅಳವಂಡಿಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ತಾಪಂ ಸಹಾಯಕ ನಿರ್ದೇಶಕ ಮಹೇಶ ಮಾತನಾಡಿದರು. ಪಿಡಿಒ ಕೊಟ್ರಪ್ಪ ಅಂಗಡಿ, ಪ್ರಾಚಾರ್ಯ ನವೀನ ಇನಾಮದಾರ, ಐಇಸಿ ಸಂಯೋಜಕ ದೇವರಾಜ ಪತ್ತಾರ, ಅಂಗನವಾಡಿ ಮೇಲ್ವಿಚಾರಕಿ ರಹಮತ್‌ಬೀ, ಉಪನ್ಯಾಸಕರಾದ ಅಮರೇಶ, ಎಸ್.ಎಸ್. ಅಂಗಡಿ, ದೇವಮ್ಮ, ಗಣೇಶ, ನೀಲಪ್ಪ, ಚನ್ನಯ್ಯ, ಗ್ರಾಪಂ ಕಾರ್ಯದರ್ಶಿ ಬಸವರಾಜ ಇತರರಿದ್ದರು.
Published on:
Copied
Follow Us
ಅಳವಂಡಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಮಹತ್ವದ್ದಾಗಿದ್ದು, ಯುವಜನತೆ ಹಾಗೂ ಸಾರ್ವಜನಿಕರು ಮತಪಟ್ಟಿ ಪರಿಷ್ಕರಣೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಸಹಾಯಕ ನಿರ್ದೇಶಕ ಮಹೇಶ ತಿಳಿಸಿದರು.
ಕೊಪ್ಪಳ ತಾಲೂಕು ಸ್ವೀಪ್ ಸಮಿತಿ, ಅಳವಂಡಿ ಗ್ರಾಪಂ, ಶ್ರೀ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ವಿದ್ಯಾಲಯದಿಂದ ಶುಕ್ರವಾರ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಧಾರ್ ಜೋಡಣೆ ಮಾಡಿಕೊಳ್ಳಬೇಕು. ಬೂತ್ ಮಟ್ಟದ ಅಧಿಕಾರಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು.
ಅನರ್ಹರು, ಮರಣ ಹೊಂದಿರುವವರು, ಸ್ಥಳಾಂತರಗೊಂಡಿರುವವರು, ನಕಲು ಹೆಸರುಗಳನ್ನು ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವುದು ಇದರ ಉದ್ದೇಶವಾಗಿದೆ. ಮತದಾರರು ಎಸ್‌ಐಆರ್ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ತಿಳಿಸಿದರು. ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಯಿತು.