ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಶಿಕಲಾ ಮಾತನಾಡಿ, ನಿಂತ ನೀರಿನಲ್ಲಿ ಈಡೀಸ್ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಮನೆಯಲ್ಲಿರುವ ತೊಟ್ಟಿ, ಬ್ಯಾರಲ್ಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಿ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸೊಳ್ಳೆಗಳು ಕಚ್ಚದಂತೆ ಮೈ ತುಂಬಾ ಬಟ್ಟೆ ಹಾಕಿಕೊಳ್ಳಬೇಕು. ಹಳೆಯ ಪಾತ್ರೆ, ಮಡಕೆ, ಟಯರ್, ಬಕೆಟ್, ಪ್ಲಾಸ್ಟಿಕ್ ಕಪ್, ಎಳನೀರಿನ ಚಿಪು$್ಪ ಮೊದಲಾದವುಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹಾಗಾಗಿ ಸೊಳ್ಳೆ ನಿಯಂತ್ರಣ ಎಲ್ಲರ ಜವಾಬ್ದಾರಿ ಎಂದರು.