3 ಸಚಿವ ಸ್ಥಾನ?: ಬೆಳಗಾವಿ ಜಿಲ್ಲೆಗೆ ಕನಿಷ್ಠ ಮೂರು ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ಇದೆ. ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ, ಲಕ್ಷ್ಮಣ ಸವದಿ, ಗಣೇಶ ಹುಕ್ಕೇರಿ, ಲಕ್ಷ್ಮೀ ಹೆಬ್ಬಾಳ್ಕರ್ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷದಲ್ಲಿನ ಹಿರಿತನ ಆಧಾರದ ಮೇಲೆ ಇಬ್ಬರಿಗೆ ಅಥವಾ ಮೂವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.