

ತಾಲೂಕಿನ ಕೈವಾರ ಅಂಬೇಡ್ಕರ್ ಅನುದಾನಿತ ಪ್ರೌಢಶಾಲೆಯಲ್ಲಿ 20 ವರ್ಷಗಳಿಂದ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ದಾವಣಗೆರೆ ಜಿಲ್ಲೆಯ ಶಿಕ್ಷಕ ದಂಪತಿ ಸಿ.ಉಮೇಶ್ ಹಾಗೂ ಯೋಗಮ್ಮ ಮಲ್ಲಾಪುರ 3 ತಿಂಗಳ ಅಂತರದಲ್ಲಿ ನಿವೃತ್ತಿ ಹೊಂದಿರುವುದು ವಿಶೇಷ. ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.