ಆಡಳಿತರೂಢ ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳಿಗೆ ರೈತರ ಮೇಲೆ ಕಾಳಜಿ ಇಲ್ಲವಾಗಿದೆ. ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ನಮ್ಮ ಭಾಗಕ್ಕೆ ನೀರಾವರಿ ನಿಗಮ ಕಚೇರಿಗಳು ಸ್ಥಳಾಂತರವಾದರೆ ರೈತರಿಗೆ ಅನುಕೂಲವಾಗಲಿದೆ. ಬೆಳೆಗಳಿಗೆ ರೋಗಬಾಧೆ, ಅಸ್ಥಿರ ಹವಾಮಾನ, ಬೆಲೆ ಕುಸಿತ ಸೇರಿ ಇತರ ಸಮಸ್ಯೆಗಳಿಂದ ತೊಂದರೆಯಾಗುತ್ತಿದೆ. ಉತ್ತರ ಕರ್ನಾಟಕದ ಭಾಗದ ಶಾಸಕರು, ಸಂಸದರು ಮತ್ತು ಆಡಳಿತ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಈಗಿನ ಸರ್ಕಾರವು ನೀರಾವರಿ ನಿಗಮದ ಪ್ರಾದೇಶಿಕ ಕಚೇರಿಗಳ ಸ್ಥಳಾಂತರಕ್ಕೆ ಇಚ್ಛಾಶಕ್ತಿ ತೋರಬೇಕೆಂದು ಉತ್ತರ ಕರ್ನಾಟಕ ರೈತ ಅಭಿವೃದ್ಧಿ ಸಂಘ ಸೇರಿ ನೂರಾರು ರೈತರು ಒತ್ತಾಯಿಸಿದ್ದಾರೆ.