ತಾಲೂಕಿನ ಕಾರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೈಪಾಸ್ ರಸ್ತೆ ಯೋಜನೆ ಸಾರ್ವಜನಿಕರ ಹಿತದೃಷ್ಟಿಯಿಂದ ಉತ್ತಮ ಯೋಜನೆಯಾಗಿದೆ. ಪಟ್ಟಣದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಸಮಸ್ಯೆಗೆ ಇದು ಶಾಶ್ವತ ಪರಿಹಾರವಾಗಲಿದೆ. ಆದರೆ, ರಸ್ತೆ ನಿಮಾರ್ಣಕ್ಕಾಗಿ ರೈತರ ಜೀವನಾಡಿಯಾದ ಕೃಷಿ ಭೂಮಿಯನ್ನು ವಶಕ್ಕೆ ಪಡೆಯಲಾಗುತ್ತಿದೆ. ಬೆಳೆಗಳನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ರೈತರು ತಮ್ಮ ಜಮೀನು ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ನಿಗದಿಪಡಿದ ಸಾಮಾನ್ಯ ಪರಿಹಾರ ದರ ಬದಲು ಮಾರುಕಟ್ಟೆ ಬೆಲೆಯಂತೆ ನ್ಯಾಯಸಮ್ಮತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.