ತಾಲೂಕಿನ ಮಾರ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸದಸ್ಯರಿಗೆ ಸೋಮವಾರ ಆಯೋಜಿಸಿದ್ದ ಕೆಸಿಸಿ ಬೆಳೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಚೆಕ್ ವಿತರಿಸಿ ಮಾತನಾಡಿದರು.
ರೈತರು ಕೃಷಿಯಲ್ಲಿ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಸಂಘದ ಸದ್ಯರಿಗೆ ಕೆಸಿಸಿ ಬೆಳೆ ಸಾಲ ವಿತರಿಸಲಾಗುತ್ತಿದೆ. ಈ ಬಾರಿ 111 ರೈತರಿಗೆ ಸಾಲವನ್ನು ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಾಲ ಸೌಲಭ್ಯ ದೊರಕಿಸಿಕೊಡಲಾಗುವುದು. ಪ್ರತಿಯೊಬ್ಬರೂ ಪಡೆದ ಸಾಲವನ್ನು ನಿಗದಿತ ಅವಧಿಯೊಳಗೆ ಮರುಪಾವತಿಸುವುದರ ಮೂಲಕ ಸಂಘದಿಂದ ಇನ್ನು ಹೆಚ್ಚಿನ ಸೌಕರ್ಯ ಪಡೆಯಬೇಕು. ಸಂಘದ ಆಡಳಿತ ಮಂಡಳಿ ಉತ್ತಮವಾಗಿ ಕಾರ್ಯನಿರ್ವಹಿಸುವುದರ ಮೂಲಕ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ರೈತರಿಗೆ ದೊರಕಿಸಿ ಕೊಡಬೇಕು. ಸಂಘದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಇದೇ ವೇಳೆ ಮಾಜಿ ಶಾಸಕರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ನಿರ್ದೇಶಕರಾದ ಜಪಮಾಲೆ, ಧರ್ಮರಾಜ್, ಭೂಪಾಲ್, ಮಹಾದೇವ, ಪೌಲ್‌ರಾಜ್, ಗೋವಿಂದನ್, ಸೇಸುರಾಜ್, ಪುಷ್ಪಾ ಇತರರು ಇದ್ದರು.