ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಲಿ

Farmers should mandatorily get crop insurance.
Farmers should mandatorily get crop insurance.
Published on

ಮುಳಬಾಗಿಲು:

ಪ್ರಧಾನಮಂತ್ರಿ ಫಸಲ್​ಬಿಮಾ ಯೋಜನೆಯಡಿ ರಾಗಿ ಬೆಳೆ ವಿಮೆ ನೋಂದಣಿಗೆ ಆ.14 ಕೊನೆಯ ದಿನವಾಗಿದ್ದು, ತಾಲೂಕಿನ ರೈತರು ಕಡ್ಡಾಯವಾಗಿ ನಿಗದಿತ ಅವಧಿಯೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಮೋದ್​ ಬಾಬು ತಿಳಿಸಿದ್ದಾರೆ.

ಈ ಬಾರಿ 15 ಸಾವಿರ ರೈತರನ್ನು ಯೋಜನೆಯ ವ್ಯಾಪ್ತಿಗೆ ಒಳಪಡಿಸುವ ಗುರಿ ಹೊಂದಲಾಗಿದೆ. ಕೃಷಿ ಇಲಾಖೆ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಿದ ಪರಿಣಾಮ ಇದುವರೆಗೆ 4,255 ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಮಳೆ ಕೊರತೆಯಿಂದ ನೆಲಗಡಲೆ ಬೆಳೆ ನಾಶವಾಗಿದೆ. ತೋಟಗಾರಿಕೆ ಅಧಿಕಾರಿಗಳು ಈಗಾಗಲೇ ಪರಿಶೀಲಿಸಿ ವರದಿ ಸಿದ್ಧಪಡಿಸಿದ್ದಾರೆ. ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು.

— ಕೆ.ಪ್ರಮೋದ್​ ಬಾಬು ಸಹಾಯಕ ನಿರ್ದೇಶಕ ಕೃಷಿ ಇಲಾಖೆ, ಮುಳಬಾಗಿಲು

ಈ ವರ್ಷ ಮಳೆಯ ಕೊರತೆಯಿಂದ ನೆಲಗಡಲೆ ಸೇರಿ ಹಲವು ಬೆಳೆಗಳು ಹಾನಿಗೊಳಗಾಗಿವೆ. ನೆಲಗಡಲೆ ಬೆಳೆ ಹಾನಿಯನ್ನು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಿದ್ದು, ಸರ್ಕಾರದ ಮುಂದಿನ ಕ್ರಮದ ನಿರೀಕ್ಷೆಯಿದೆ. ರಾಗಿ ಬೆಳೆದ ರೈತರು ಆ.14ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ ಪ್ರಧಾನಮಂತ್ರಿ ಫಸಲ್​ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಬೇಕು. ಬೆಳೆ ನಷ್ಟ ಸಂಭವಿಸಿದ ಸಂದರ್ಭದಲ್ಲಿ ಆರ್ಥಿಕ ನೆರವು ಪಡೆಯಲು ಬೆಳೆ ವಿಮೆ ಸಹಕಾರಿಯಾಗಿರುವುದರಿಂದ ಯಾವುದೇ ರೈತರು ಅವಕಾಶ ಕೈಚೆಲ್ಲಬಾರದು ಎಂದು ಮನವಿ ಮಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net