ಆತ್ಮ ಯೋಜನೆ ಉಪನಿರ್ದೇಶಕ ಶಿವನಗೌಡ ಬಿರಾದಾರ ಮಾತನಾಡಿ, ರಾಸಾಯನಿಕ ಗೊಬ್ಬರ ಕಡಿಮೆ ಬಳಸಿ ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಬೇಸಾಯ ಶಾಸ್ತ್ರಜ್ಞ ಡಾ. ದಿನೇಶ ಕುಮಾರ ಎಸ್.ಪಿ. ಮಾತನಾಡಿ, ರೈತರು ಮಣ್ಣಿನ ಆರೋಗ್ಯ ಕಾಪಾಡಲು ಯಥೇಚ್ಛವಾಗಿ ಸಾವಯವ ಗೊಬ್ಬರಗಳಾದ ತಿಪ್ಪೆಗೊಬ್ಬರ, ಎರೆಹುಳು ಗೊಬ್ಬರ, ಕಾಂಪೋಸ್ಟ್ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರಗಳಾದ ಸೆಣಬು, ಗೊಬ್ಬರದ ಗಿಡಗಳು ಬೆಳೆದು ಮಣ್ಣಿನ ಬೆರೆತು ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುತ್ತದೆ. ಇದರಿಂದ ರಾಸಾಯನಿಕ ಗೊಬ್ಬರದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬಹುದು ಎಂದು ಹೇಳಿದರು.