ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಕನ್ನಡ ಕ್ರೈಸ್ತ ಸಾಧಕ ಬೆಂಜಮಿನ್ ಫ್ರಾನ್ಸಿಸ್ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ತಲಾ 10 ಸಾವಿರ ನಗದು ಒಳಗೊಂಡಿದೆ. ಕಸಾಪ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ.
ಈ ಪ್ರಶಸ್ತಿಯನ್ನು ಪ್ರತಿ ವರ್ಷ ಕನ್ನಡ ಕ್ರೈಸ್ತ ಸಾಧಕರೊಬ್ಬರು ಹಾಗೂ ಕನ್ನಡ ಪರ ಹೋರಾಟಗಳಲ್ಲಿ ಸಕ್ರಿಯವಾಗಿ ಇರುವ ಒಬ್ಬರಿಗೆ ನೀಡಲಾಗುತ್ತಿದೆ ಎಂದು ಕಸಾಪ ತಿಳಿಸಿದೆ.