ನಿರ್ಭೀತ ಪತ್ರಿಕಾ ವೃತ್ತಿಯ ಸವಾಲನ್ನು ವೃತ್ತಿಪರತೆಯಿಂದ ಗೆಲ್ಲಿ

ಮಾಧ್ಯಮ ಅಕಾಡೆಮಿ ಮತ್ತು ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಸಿಎಂ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್, ಮಾಧ್ಯಮ ಅಕಾಡಮಿ ಅಧ್ಯಕ್ಷೆ ಆಯಿಷಾ ಖಾನುಂ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಉಪಸ್ಥಿತರಿದ್ದರು.
ಮಾಧ್ಯಮ ಅಕಾಡೆಮಿ ಮತ್ತು ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಸಿಎಂ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್, ಮಾಧ್ಯಮ ಅಕಾಡಮಿ ಅಧ್ಯಕ್ಷೆ ಆಯಿಷಾ ಖಾನುಂ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಉಪಸ್ಥಿತರಿದ್ದರು.
Published on
ಬೆಂಗಳೂರು: ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದೆ. ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದರೆ ಸಮಾಜಕ್ಕೆ ಒಳಿತಾಗುತ್ತದೆ. ಫೇಕ್ ನ್ಯೂಸ್ ವೈರಸ್ ಇದ್ದಂತೆ. ಇದರಿಂದ ಪತ್ರಿಕಾ ವೃತ್ತಿ ಹೊರಬರಬೇಕಿದೆ ಎಂದು ಸಿಎಂ ಹೇಳಿದರು.
ಬುಧವಾರ ಬೆಳಗ್ಗೆ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದೆ. ಆದರೆ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಕೆಲವು ಸುದ್ದಿವಾಹಿನಿಗಳು ಪ್ರಸಾರ ಮಾಡಿದ್ದವು. ಇದು ಸಂಪೂರ್ಣ ಸುಳ್ಳು ಸುದ್ದಿ ಎಂದು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದರು.
ಮೇಕೆದಾಟು ಪಾದಯಾತ್ರೆ ವೇಳೆ ನಿತ್ರಾಣಗೊಂಡು ಕಾರ್ಯಕರ್ತರ ತಳ್ಳಾಟದಿಂದ ತೊಂದರೆಯಾಗಿದ್ದ ಘಟನೆಯನ್ನು ಕುಡಿದು ನಡೆದುಕೊಂಡು ಬರುತ್ತಿದ್ದಾರೆ ಎಂಬ ರೀತಿಯಲ್ಲಿ ಬಿಂಬಿಸಲಾಗಿತ್ತು. ಇದು ಜನರಿಗೆ ತಪ್ಪು ಸಂದೇಶ ನೀಡುವ ಉದ್ದೇಶಪೂರ್ವಕ ಪ್ರಯತ್ನವಾಗಿತ್ತು. ನಾನು ತಪ್ಪು ಮಾಡಿದರೆ ಅದನ್ನು ಬಹಿರಂಗಪಡಿಸಿ. ಆದರೆ, ಸುಳ್ಳು ಸುದ್ದಿಗಳನ್ನು ಪ್ರಕಟಿಸಬೇಡಿ, ಪ್ರಸಾರ ಮಾಡಬೇಡಿ ಎಂದು ಮುಖ್ಯಮಂತ್ರಿ ತಿಳಿಸಿದರು.
ಸುದ್ದಿ ಪ್ರಕಟವಾಗುವವರೆಗೆ ಅದು ಪತ್ರಕರ್ತರದ್ದಾಗಿರುತ್ತದೆ. ಪ್ರಕಟವಾದ ನಂತರ ಅದು ಸಮಾಜದ ಆಸ್ತಿಯಾಗುತ್ತದೆ. ಆದ್ದರಿಂದ ಪ್ರತಿಯೊಂದು ಸುದ್ದಿಯಲ್ಲೂ ಸತ್ಯ ಮತ್ತು ಪ್ರಾಮಾಣಿಕತೆ ಇರಬೇಕು ಎಂದು ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದರು. ಮಹಾತ್ಮ ಗಾಂಧಿ ಸೇರಿದಂತೆ ಅನೇಕ ಮಹನೀಯರು ಪತ್ರಕರ್ತರಾಗಿ ಪತ್ರಿಕಾ ವೃತ್ತಿಯ ಘನತೆಯನ್ನು ಹೆಚ್ಚಿಸಿದ್ದಾರೆ. ಆ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಸಲಹೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net