ಸೇಡಂ: ನಗರದ ವಿಶ್ವನಗರದಲ್ಲಿರುವ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಹಂಗನಳ್ಳಿ ಗ್ರಾಮದ ಚಂದ್ರಿಕಾ ತಿಪ್ಪೆಸ್ವಾಮಿ(19) ನೇಣಿಗೆ ಶರಣಾದ ವಿದ್ಯಾರ್ಥಿನಿ. ವಸತಿ ನಿಲಯದ ಕೋಣೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಬೆಳಿಗ್ಗೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎಸ್ಸಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತಿದ್ದಳು. ಸುದ್ದಿ ತಿಳಿದು ವಸತಿ ನಿಲಯಕ್ಕೆ ಆಗಮಿಸಿದ ಮೃತ ವಿದ್ಯಾರ್ಥಿನಿಯ ಪಾಲಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಎಸ್ಐ ಉಪೇಂದ್ರಕುಮಾರ ಭೇಟಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳಾದ ಶರಣಪ್ಪ, ರಾಮರೆಡ್ಡಿ, ನಾಗರಾಜ, ಬಾಲಕೃಷ್ಣರೆಡ್ಡಿ, ದೇವಕಿ ಇದ್ದರು.